ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾ ಸೆಪ್ಟೆಂಬರ್​ 28ರಂದು ರಿಲೀಸ್​ ಆಗಲಿದೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಈ ಚಿತ್ರದ ಬಿಡುಗಡೆ ದಿನಾಂಕ (Salaar Release Date) ಮುಂದೆ ಹೋಗಿದೆ ಎಂಬ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸುದ್ದಿ ಹರಿದಾಡಲು ಆರಂಭಿಸಿತ್ತು.
ಹಾಗಿದ್ದರೂ ಕೂಡ ಈ ಚಿತ್ರತಂಡದವರು ಮೌನವಾಗಿದ್ದರು. ಅಂತೂ ಇಂತೂ ಈಗ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ಆ ಬಗ್ಗೆ ಪ್ರತಿಕ್ರಿಯೆ ಸಿಕ್ಕಿದೆ.ಪ್ರಭಾಸ್​ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ಸಿನಿಮಾದಲ್ಲಿ ನಟಿಸುತ್ತಿದ್ದು, ಪ್ರಶಾಂತ್​ ನೀಲ್​ ಚಿತ್ರದ ನಿರ್ದೇಶನ ಮಾಡಲಿದ್ದಾರೆ.
ಬಿಡುಗಡೆ ಆಗಿರುವ ಟೀಸರ್​ಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಆದಷ್ಟು ಬೇಗ ‘ಸಲಾರ್​’ ನೋಡಬೇಕು ಎಂಬುದು ಫ್ಯಾನ್ಸ್​ ಆಸೆ ಆಗಿತ್ತು. ಆದರೆ ರಿಲೀಸ್​ ದಿನಾಂಕ ಮುಂದೂಡಿಕೆ ಆಗಿದ್ದು, ಇನ್ನೂ ಒಂದಷ್ಟು ತಿಂಗಳು ಕಾಯುವುದು ಅನಿವಾರ್ಯ ಆಗಿದೆ.
We deeply appreciate your unwavering support for#Salaar. With consideration, we must delay the original September 28 release due to unforeseen circumstances.Please understand this decision is made with care, as we're committed to delivering an exceptional cinematic experience.…pic.twitter.com/abAE9xPeba
ನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ. ಹಾಗಾಗಿ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಆ ಕಾರಣದಿಂದ ಅಂದುಕೊಂಡ ದಿನಾಂಕದಲ್ಲಿ ‘ಸಲಾರ್​’ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಸಿನಿಮಾವನ್ನು ಕಟ್ಟಿಕೊಡಬೇಕು ಎಂಬ ಉದ್ದೇಶದಿಂದ ರಿಲೀಸ್​ ದಿನಾಂಕ ಮುಂದೂಡಲಾಗಿದೆ.
‘ಸಲಾರ್​’ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ? ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುವುದಾಗಿ ‘ಹೊಂಬಾಳೆ ಫಿಲ್ಮ್ಸ್​’ ಹೇಳಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four + seventeen =
Remember me
