ಹೈದರಾಬಾದ್​:ನಟಿ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಟಾರ್ ಹೀರೋಯಿನ್ ಮೇಲೆ ಈಗ ಬಹುದೊಡ್ಡ ಆರೋಪ ಕೇಳಿಬಂದಿದೆ.
ಇದನ್ನೂ ಓದಿ:ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
ಸಮಂತಾ ಇತ್ತೀಚೆಗಷ್ಟೇ ಯೂಟ್ಯೂಬ್ ಪಾಡ್‌ಕಾಸ್ಟ್‌ನಲ್ಲಿ ಕೆಲವು ಆರೋಗ್ಯ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಟೇಕ್ 20: ಹೆಲ್ತ್ ಪಾಡ್‌ಕಾಸ್ಟ್ ಸರಣಿಯ ಮೊದಲ ಸಂಚಿಕೆಯನ್ನು 3 ವಾರಗಳ ಹಿಂದೆ ಫೆಬ್ರವರಿ 19 ರಂದು ಬಿಡುಗಡೆ ಮಾಡಲಾಯಿತು. ಇದರಲ್ಲಿ ಸಮಂತಾ ಅವರ ಕೆಲವು ಹೇಳಿಕೆಗಳ ಬಗ್ಗೆ ಓರ್ವ ವ್ಯಕ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ ಈ ಬಗ್ಗೆ ಅವರು ಪೋಸ್ಟ್‌ ಮಾಡಿದ್ದಾರೆ. ಇವರೊಬ್ಬ ವೈದ್ಯರು ಎಂದು ಹೇಳಲಾಗಿದೆ. ನಟಿ ಸಮಂತಾ ತನ್ನ 33 ಮಿಲಿಯನ್ ಫಾಲೋವರ್ಸ್ ಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
ಯಕೃತ್ತಿನ ಆರೋಗ್ಯಕ್ಕೆ ದಂಡೇಲಿಯನ್ ಮೂಲಿಕೆ ಅತ್ಯುತ್ತಮ ಔಷಧ ಎಂದು ಆ ಪಾಡ್‌ಕಾಸ್ಟ್‌ನಲ್ಲಿ ಚರ್ಚಿಸುವುದು ಸೂಕ್ತವಲ್ಲ. ಅರಿವಿಲ್ಲದೆ ಅನುಯಾಯಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವೈದ್ಯರು ತಮ್ಮ ಪೋಸ್ಟ್ ಮೂಲಕ ಸಮಂತಾ ಮೇಲೆ ಆರೋಪ ಮಾಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಟ್ವೀಟ್‌ಗಳು ಮತ್ತು ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮಯೋಸಿಟಿಸ್ ನಿಂದ ಬಳಲುತ್ತಿದ್ದ ಸಮಂತಾ ಸಿನಿಮಾಗಳಿಂದ ಕೆಲವು ದಿನಗಳಿಂದ ವಿರಾಮ ತೆಗೆದುಕೊಂಡರು. ಇದೀಗ ಸಮಂತಾ ಮತ್ತೆ ಸಿನಿಮಾಗೆ ಎಂಟ್ರಿ ಕೊಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಸಮಂತಾ ಸೌತ್ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರು. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಿನಿಮಾ ಲೋಕದಲ್ಲಿ ಲಕ್ಷಾಂತರ ಫಾಲೋವರ್ಸ್ ಇದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳಲ್ಲಿ ನಟಿಸುತ್ತಲೇ ಫಿಟ್ ನೆಸ್ ಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.
ಸಮಂತಾ ‘ದಿ ಫ್ಯಾಮಿಲಿ ಮ್ಯಾನ್ 2’ ಸರಣಿಯೊಂದಿಗೆ ಓಟಿಟಿ ಪ್ರವೇಶಿಸಿದರು. ಆಕೆ ಈಗ ಓಟಿಟಿ ಗಳಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಾಯಕಿ. ಸಮಂತಾ ಪ್ರತಿ ಸರಣಿಗೆ 10 ಕೋಟಿ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ.
ಅನಾರೋಗ್ಯದ ಕಾರಣ ನಟನೆಯಿಂದ ವಿರಾಮ ಪಡೆದಿರುವ ಜನಪ್ರಿಯ ನಾಯಕಿ ಸಮಂತಾ ಶೀಘ್ರದಲ್ಲೇ ವರುಣ್ ಧವನ್ ಜೊತೆಗಿನ ಸಿಟಾಡೆಲ್ ಇಂಡಿಯಾ ಸರಣಿಯ ಮೂಲಕ ರೀಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ.
ವೈದ್ಯರ ಟೀಕೆಗೆ ನಟಿ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ನೆಟಿಜನ್‌ಗಳು ಕಾತುರದಿಂದ ಕಾಯುತ್ತಿದ್ದಾರೆ. ಕೆಲವರು ಆಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಕೂಡ ಮಾಡುತ್ತಿದ್ದಾರೆ.
ಮೂಡ್​ ಎಕ್ಸ್​, ಹಾಟ್​ ಶಾಟ್ಸ್​ ಸೇರಿ ಭಾರತದಲ್ಲಿ 18 ಓಟಿಟಿ ಪ್ಲಾಟ್‌ಫಾರ್ಮ್‌ಗಳ ನಿಷೇಧ: ಕಾರಣ ಇದೇ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
