ನವದೆಹಲಿ:ಸಲಿಂಗ ವಿವಾಹ ದೇಶದ ಸಾಮಾಜಿಕ ನೀತಿಗಳಿಂದ ದೂರವಿರುವ “ನಗರದ ಎಲೈಟ್ ಜನರ ಪರಿಕಲ್ಪನೆ” ಎಂದು ಕೇಂದ್ರವು ಭಾನುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಅದರ ಕಾನೂನು ಮಾನ್ಯತೆಯನ್ನು ಕೋರಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸುವಂತೆ ಕೆಂದ್ರ ಸರ್ಕಾರ ಸುಪ್ರೀಂ ಕೋರ್ಟ್ಅನ್ನು ಒತ್ತಾಯಿಸಿದೆ.
ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವನ್ನು ರಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ನ್ಯಾಯಪೀಠ ಮಂಗಳವಾರ ಅರ್ಜಿಗಳ ವಿಚಾರಣೆ ಆರಂಭಿಸಲಿದೆ.
ವಿಚಾರಣೆಗೆ ಮುಂಚಿತವಾಗಿ, ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಭಿನ್ನಲಿಂಗೀಯ ಒಕ್ಕೂಟವನ್ನು ಮೀರಿ ಮದುವೆಯ ಪರಿಕಲ್ಪನೆಯನ್ನು ವಿಸ್ತರಿಸುವುದು “ಹೊಸ ಸಾಮಾಜಿಕ ಸಂಸ್ಥೆಯನ್ನು ರಚಿಸುವುದಕ್ಕೆ ಸಮಾನವಾಗಿದೆ” ಎಂದು ಹೇಳಿದೆ.
ಎಲ್ಲಾ ಗ್ರಾಮೀಣ, ಅರೆ-ಗ್ರಾಮೀಣ ಮತ್ತು ನಗರ ಜನಸಂಖ್ಯೆಯ ವಿಶಾಲ ದೃಷ್ಟಿಕೋನಗಳು, ಧಾರ್ಮಿಕ ಪಂಗಡಗಳ ದೃಷ್ಟಿಕೋನಗಳು ಮತ್ತು ವೈಯಕ್ತಿಕ ಕಾನೂನುಗಳು ಮತ್ತು ವಿವಾಹ ಕ್ಷೇತ್ರವನ್ನು ನಿಯಂತ್ರಿಸುವ ಪದ್ಧತಿಗಳನ್ನು ಗಣನೆಗೆ ತೆಗೆದುಕೊಂಡು ಸಂಸತ್ತು ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಕೇಂದ್ರ ಹೇಳಿದೆ.
ನಿಗದಿತ ವಿಚಾರಣೆಗೆ ಎರಡು ದಿನಗಳ ಮೊದಲು ಸಲ್ಲಿಸಿದ ಅರ್ಜಿಯ ಮೂಲಕ ಪ್ರಾಥಮಿಕ ಆಕ್ಷೇಪಣೆಗಳನ್ನು ಎತ್ತಿದ ಕೇಂದ್ರ ಸರ್ಕಾರ, ಅರ್ಜಿದಾರರು, ಸಲಿಂಗ ವಿವಾಹದ ಹಕ್ಕುಗಳನ್ನು ಒತ್ತಾಯಿಸುವ ಮೂಲಕ, “ಸಾಮಾಜಿಕ ಸ್ವೀಕಾರದ ಉದ್ದೇಶಕ್ಕಾಗಿ ಕೇವಲ ನಗರ ಗಣ್ಯರ ದೃಷ್ಟಿಕೋನಗಳನ್ನು ಮುಂದಿಡುತ್ತಿದ್ದಾರೆ” ಎಂದು ಹೇಳಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
