ನೊಯ್ಡಾ:ಅತಿಕ್ರಮಣ ಮಾಡಿಕೊಂಡಿದ್ದ ಜಾಗವನ್ನು ತೆರವುಗೊಳಿಸಲು ಮುಂದಾದ ಅಧಿಕಾರಿ ಮೇಲೆ ಬೀದಿ ಬದಿ ವ್ಯಾಪಾರಿ ಒಬ್ಬ ವಿನೂತನವಾಗಿ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ಉತ್ತರಪ್ರದೇಶದ ನೊಯ್ಡಾದಲ್ಲಿ ನಡೆದಿದೆ.
ಅತಿಕ್ರಮಣ ತೆರವು ಮಾಡಲು ಮುಂದಾಗಿದ್ದ ಪಾಲಿಕೆ ಅಧಿಕಾರಿ ಮೇಲೆ ಸಮೋಸ ಮಾರಾಟಗಾರ ಓರ್ವ ಹಲ್ಲೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ನೊಯ್ಡಾ ಪಾಲಿಕೆ ವ್ಯಾಪ್ತಿಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು ಪಿಲ್ಲರ್​ ಸಂಖ್ಯೆ 51ರ ಬಳಿ ಅತಿಕ್ರಮಣದ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ.
ಈ ವೇಳೆ ಸಮೋಸ ವ್ಯಾಪಾರಿ ಗಾಡಿಗೆ ಅಧಿಕಾರಿಗಳ ಕಡೆಯಿಂದ ಹಾನಿಯಾಗಿದೆ ಎಂದು ತಿಳಿದು ಬಂದಿದ್ದು ಆತ ಒತ್ತುವರಿ ತೆರವನ್ನು ನಿಲ್ಲಿಸುವಂತೆ ವಿನಂತಿಸಿದ್ದಾನೆ.
नोएडा अथॉरिटी के कर्मचारी पर हमला : समोसे वाले ने फेकी गरम चटनी, बीच सड़क पर दौड़ाया, Video@noida_authority@noidapolice#Noidahttps://t.co/sVrmr9rHD7(@Nitinparashar__)pic.twitter.com/CubTFNtF2j
ಇದಕ್ಕೊಪ್ಪದ ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ವ್ಯಾಪಾರಿ ಏಕಾಏಕಿ ಅಧಿಕಾರಿಯ ಮೇಲೆ ಚಟ್ನಿಯನ್ನು ಚೆಲ್ಲಿ ಆಕ್ರೋಶವನ್ನು ಹೊರಹಾಕಿದ್ದಾನೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಈ ಕುರಿತು ಪಾಲಿಕೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
