ದೆಹಲಿ:ಭಾರತದಲ್ಲಿ ತನ್ನ ಎಫ್-ಸರಣಿಯ ಸ್ಮಾರ್ಟ್‌ಫೋನ್ ಶ್ರೇಣಿಯನ್ನು ವಿಸ್ತರಿಸುತ್ತಿರುವ ಸ್ಯಾಮ್‌ಸಂಗ್ ಗ್ಯಾಲಾಕ್ಸಿ ಎಫ್​54 5G ಸ್ಮಾರ್ಟ್​ಫೋನ್​ ಬಿಡುಗಡೆ ಮಾಡಿದೆ. ಗ್ಯಾಲಾಕ್ಸಿ ಎಫ್​ ಸರಣಿಯು ಸ್ಯಾಮ್​ಸಂಗ್​ನ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಎಂದು ಹೇಳಲಾಗಿದೆ.
ಇದನ್ನೂ ಓದಿ:ಚುಡಾಯಿಸಿದವನಿಗೆ ಚಪ್ಪಲಿಯಲ್ಲಿ ಹೊಡೆದ ಕಾಲೇಜು ವಿದ್ಯಾರ್ಥಿನಿ; ಪೊಲೀಸರ ವಶಕ್ಕೆ ಆರೋಪಿ..
ಗ್ಯಾಲಾಕ್ಸಿ ಎಫ್​54 5G ಹ್ಯಾಂಡ್‌ಸೆಟ್ ನಯವಾದ ವಿನ್ಯಾಸವನ್ನು ಹೊಂದಿದೆ. ಈ ಸ್ಮಾರ್ಟ್​ಫೋನ್ ಮೆಟಿಯರ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಸಿಲ್ವರ್ ಬಣ್ಣವನ್ನು ಹೊಂದಿದ್ದು, ಇದು 8GB RAM ಮತ್ತು 256GB ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿದೆ. ಇದು ಕೇವಲ ಒಂದೇ ರೂಪಾಂತರದಲ್ಲಿ ಲಭ್ಯವಿದೆ.
108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮರಾ, 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮರಾ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್​ನ್ನು ಒಳಗೊಂಡಂತೆ ಹಿಂಬದಿಯಲ್ಲಿ ಮೂರೂ ಕ್ಯಾಮರಾವನ್ನು ಹೊಂದಿದೆ. ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮರಾವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಾಕ್ಸಿ ಎಫ್​54 ಅಲ್ಟ್ರಾ-HD ಮತ್ತು 4K ವೀಡಿಯೊ ರೆಕಾರ್ಡಿಂಗ್​ನ್ನು ಬೆಂಬಲಿಸುವುದರ ಜೊತೆಗೆ ದೀರ್ಘಕಾಲ ಬಾಳಿಕೆ ಬರುವ 6,000mAh ಬ್ಯಾಟರಿ ಹೊಂದಿದೆ. 6.7-ಇಂಚಿನ ಬೃಹತ್ ಡಿಸ್​ಪ್ಲೇ ಪರದೆಯನ್ನು ಹೊಂದಿರುವ ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್-5 ಅನ್ನು  ಹೊಂದಿದೆ. ಈ ಫೋನ್‌ನ ಮಾರಾಟದ ದಿನಾಂಕವನ್ನು ಕಂಪನಿಯು ಇನ್ನೂ ಬಹಿರಂಗಪಡಿಸಿಲ್ಲ. ಆದರೆ ಈ ಫೋನಿನ ಬೆಲೆಯು ಭಾರತದಲ್ಲಿ 27,999ರೂ.ಗಳ ಆಸುಪಾಸಿನಲ್ಲಿ ಇರಬಹುದು ಎಂದು ಅಂದಾಜಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
