ನವದೆಹಲಿ:ಸನಾತನ ಧರ್ಮದ ಕುರಿತು ಹೇಳಿಕೆ ವಿವಾದಕ್ಕೀಡಾಗಿರುವ ತಮಿಳುನಾಡು ಸಿಎಂ ಸ್ಟಾಲಿನ್​​ ಪುತ್ರ, ಸಚಿವ ಉದಯನಿಧಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲ ಆರ್​.ಎನ್​. ರವಿಗೆ ಪತ್ರ ಬರೆದಿರುವುದಾಗಿ ಹಿರಿಯ ಬಿಜೆಪಿ ನಾಯಕ, ಮಾಜಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್​ ಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಸ್ಟಾಲಿನ್​ ಪುತ್ರ ಉದಯನಿಧಿ ತಮಿಳುನಾಡು ಸರ್ಕಾರದಲ್ಲಿ ಸೃಜನಪಕ್ಷಪಾತದಿಂದ ಸಚಿವ ಸ್ಥಾನ ಪಡೆದಿದ್ಧಾರೆ ಎಂದು ಆರೋಪಿಸಿದ್ದಾರೆ.
I have sent a letter to TN Governor seeking Sanction to Prosecute Stalin beta who on nepotism is a Minister. Once more if he repeats deprecating Sanatana Dharma I will work for dismissal of TN State Government. I proved in 1991 that India is a Union of States not a Federation.
ಇದನ್ನೂ ಓದಿ:ಜಿ-20 ಶೃಂಗಸಭೆ; ಮಿಂಚಲಿದೆ ಕರ್ನಾಟಕದ ಕಸೂತಿ-ಬಿದ್ರಿ ಕಲೆ
ಸೃಜನಪಕ್ಷಪಾತ ಎಸಗಿ ತಮಿಳುನಾಡು ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಸ್ಟಾಲಿನ್​ ಅವರ ಪುತ್ರ ಉದಯನಿಧಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯಪಾಲರಾದ ಆರ್​.ಎನ್​. ರವಿ ಅವರಿಗೆ ಪತ್ರ ಬರೆದಿದ್ದೇನೆ. ಸನಾತನ ಧರ್ಮದ ಕುರಿತು ಇವರು ಇವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದರೆ ನಾನು ತಮಿಳುನಾಡು ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ನಾನು ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸನಾತನ ಧರ್ಮ ಡೆಂಘಿ-ಮಲೇರಿಯಾದಂತೆ, ಅದನ್ನು ತೊಲಗಿಸಬೇಕು ಎಂದು ಹೇಳುವ ಮೂಲಕ ವಿವಾದಕ್ಕೆ ಒಳಗಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಮತ್ತೆ ಮತ್ತೆ ಅದನ್ನೇ ಹೇಳುವೆ ಎನ್ನುವ ಮೂಲಕ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 3 =
Remember me
