ಮುಂಬೈ:ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಪುತ್ರ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್, ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ವಿರುದ್ಧ ನೀಡಿದ್ದ ಹೇಳಿಕೆಗೆ ಇದೀಗ ಮುಂಬೈ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
ಇದನ್ನೂ ಓದಿ:ನಾನು ನಂದಿನಿ ಬೆಂಗಳೂರಿಗೆ ಬಂದೀನಿ; ಸಖತ್​​​ ಫೇಮಸ್​​​ ಆದ ವಿಕಿಪೀಡಿಯಾ ರೀಲ್ಸ್​​, ಒಂದೇ ದಿನದಲ್ಲಿ 5 ಮಿಲಿಯನ್​ ವೀಕ್ಷಣೆ
ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಎಂಕೆ ನಾಯಕನ ವಿರುದ್ಧ ಮುಂಬೈನ ರಾಜಧಾನಿ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಾಗಿದೆ.
ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಉದಯನಿಧಿ ಸ್ಟಾಲಿನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಮೀರಾ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂಬಂಧಪಟ್ಟ ಅಧಿಕಾರಿ ಕಾನೂನು ಕೋಶದೊಂದಿಗೆ ಚರ್ಚಿಸಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಅರೆರೆ…ಮೀನು ನಗೋದನ್ನು ನೀವು ಎಂದಾದರೂ ನೋಡಿದ್ದೀರಾ?
ವಿವಾದಕ್ಕೆ ಕಾರಣವೇನು?:ಸೆಪ್ಟೆಂಬರ್ 2 ರಂದು ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉದಯನಿಧಿ ಸ್ಟಾಲಿನ್, “ಕೊರೊನಾ, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆ ವೈರಸ್​ಗಳನ್ನು ನಿರ್ಮೂಲನೆ ಮಾಡಿದಂತೆ, ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಡಬೇಕು” ಎಂದು ಹೇಳಿದರು. ಸದ್ಯ ಈ ಹೇಳಿಕೆ ಇದೀಗ ದೇಶವ್ಯಾಪಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ,(ಏಜೆನ್ಸೀಸ್).
ನಾನಾ ಪಾಟೇಕರ್​ಗೆ ಮುಖ್ಯ ಪಾತ್ರ ಕೊಟ್ಟಿದ್ಯಾಕೆ?; ಅಸಲಿ ಕಾರಣ ತಿಳಿಸಿದ ‘ದಿ ವ್ಯಾಕ್ಸಿನ್ ವಾರ್’ ನಿರ್ದೇಶಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + one =
Remember me
