ಲಖನೌ:ಕೋರ್ಟ್ ಆವರಣದಲ್ಲೇ ಗ್ಯಾಂಗ್​ಸ್ಟರ್​​ನೊಬ್ಬ​ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ಇದನ್ನೂ ಓದಿ:ಸರ್ಕಾರ ಕಾಲಾವಕಾಶ ಕೇಳಿದೆ, ಜೂನ್​ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ: ಕುಸ್ತಿಪಟುಗಳು
ಸಂಜೀವ್ ಜೀವಾ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಬುಧವಾರ ಲಕ್ನೋ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಈತನ ಹತ್ಯೆಗೈಯ್ಯಲಾಗಿದೆ. ಕೆಲ ದಿನಗಳ ಹಿಂದೆ ಜೀವಾವಧಿ ಶಿಕ್ಷೆಗೊಳಗಾಗಿದ್ದ ಗ್ಯಾಂಗ್​ಸ್ಟರ್ ಮುಖ್ತಾರ್ ಅನ್ಸಾರಿಗೆ ಸಂಜೀವ್​​ ಆಪ್ತನಾಗಿದ್ದ ಎನ್ನಲಾಗಿದೆ.
ಬಿಜೆಪಿ ಮುಖಂಡ ಬ್ರಹ್ಮದತ್ ದ್ವಿವೇದಿ ಹತ್ಯೆ ಪ್ರಕರಣದ ಆರೋಪಿಯಾಗಿದ್ದ ಜೀವಾನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಾಗ ವೇಳೆ ವಕೀಲನ ವೇಷ ಧರಿಸಿದ್ದ ದಾಳಿಕೋರನೊಬ್ಬ ಗ್ಯಾಂಗ್​​ಸ್ಟರ್​​ನನ್ನು ಹತ್ಯೆಗೈದಿದ್ದಾನೆ. ಕೂಡಲೇ ಸ್ಥಳದಲ್ಲಿ ಕೆಲಕಾಲ ಆತಂಕದ ನಿರ್ಮಾಣವಾಗಿ ಜನರು ದಿಕ್ಕಾಪಾಲಾಗಿ ಓಡಾಡಿದ್ದಾರೆ.
ಘಟನೆಯಲ್ಲಿ ಓರ್ವ ಕಾನ್‌ಸ್ಟೆಬಲ್ ಮತ್ತು ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ದಾಳಿಕೋರರನ್ನು ಪೊಲೀಸರ ಬಂಧಿಸಿದ್ದು, ಈತ ಆರು ಸುತ್ತು ಗುಂಡು ಹಾರಿಸಿದ್ದ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
