ಮಂಡ್ಯ:ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಹಾಗೂ ಅಲ್ಲಿನ ಮಾಜಿ ಉಪ ಮುಖ್ಯಮಂತ್ರಿ ಶಶಿಕಲಾ ನಟರಾಜನ್ ಅವರು ಮಂಡ್ಯ ಬಳಿಯ ನಿಮಿಷಾಂಬಾ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ.
ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿರುವ ಶಶಿಕಲಾ ನಟರಾಜನ್, ಮೂರು ವರ್ಷಗಳ ಹಿಂದೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ನಿಮಿಷಾಂಬಾ ದೇವಸ್ಥಾನಕ್ಕೆ ಬಂದಿದ್ದಾಗ ಹರಕೆ ಹೇಳಿಕೊಂಡಿದ್ದರು.
ಇಂದು ಅವರು ಕುಟುಂಬಸಮೇತರಾಗಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಲ್ಲದೆ ಹಳೆಯ ಹರಕೆಯನ್ನು ಕೂಡ ತೀರಿಸಿದ್ದಾರೆ. ಹರಕೆ ತೀರಿಸಲು ಕುಟುಂಬಸಮೇತರಾಗಿ ಬಂದ ಅವರನ್ನು ದೇವಾಲಯದ ಅರ್ಚಕರು ವಿಶೇಷವಾಗಿ ಬರಮಾಡಿಕೊಂಡರು.
ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಪಡೆಯಲು ಜೈಲು ಅಧಿಕಾರಿಗಳಿಗೆ 2 ಕೋಟಿ ರೂ. ಲಂಚ ಕೊಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ತಮಿಳುನಾಡಿನ ಎಐಎಡಿಂಕೆ ನಾಯಕಿ ಶಶಿಕಲಾ ನಟರಾಜನ್ ಮತ್ತು ಅವರ ಆಪ್ತೆ ಇಳವರಸಿಗೆ ಎಸಿಬಿ ಇಂದು ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
https://www.vijayavani.net/son-who-came-to-final-rites-of-father-is-brain-dead/
ಗಂಡ-ಹೆಂಡಿರ ಜಗಳ ಕೊಚ್ಚಿ ಚುಚ್ಚಿಕೊಳ್ಳುವ ತನಕ; ಪತ್ನಿಯ ಸಾವು, ಪತಿ ಪರಿಸ್ಥಿತಿ ಗಂಭೀರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
