ನವದೆಹಲಿ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಮಾಜಿ ಸಚಿವ, ಎಎಪಿ ನಾಯಕ ಸತ್ಯೇಂದರ್​ ಜೈನ್​ಗೆ ದೆಹಲಿ ಹೈಕೋರ್ಟ್​​ ಜಾಮೀನು ನಿರಾಕರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್​ ಕುಮಾರ್​ ಶರ್ಮಾ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ಇತರೆ ಆರೋಪಿಗಳಾದ ವೈಭವ್​ ಜೈನ್​ ಮತ್ತು ಅಂಕುಶ್​ ಜೈನ್​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಸತ್ಯೇಂದರ್​ ಜೈನ್​ ಪರ ವಕೀಲರು ತಮ್ಮ ಕಕ್ಷಿದಾರರು ತನಿಖೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ಧಾರೆ. ಜೊತೆಗೆ ಅವರ ಆದಾಯವನ್ನು ತಪ್ಪಾಗಿ ನಮೂದಿಸಲಾಗಿದ್ದು ಈ ಹಿನ್ನಲೆಯಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.
Delhi HC dismisses jailed minister Satyender Jain, two others' bail plea in PMLA caseRead@ANIStory |https://t.co/i92YJ4f6iy#SatyebderJain#AAP#Jainbailplea#PMLAcasepic.twitter.com/UhL4nT8qI0
ಇದನ್ನೂ ಓದಿ:ಮುಸ್ಲಿಮರಿಗೆ ಪ್ರಶಸ್ತಿಕೊಡಲ್ಲ ಎಂದುಕೊಂಡಿದ್ದೆ, ಪ್ರಧಾನಿ ನನ್ನ ಅಭಿಪ್ರಾಯ ಬದಲಿಸಿದರು: ಪದ್ಮಶ್ರೀ ಪ್ರಶಸ್ತಿ ವಿಜೇತ
ಆರೋಪಿ ಸ್ಥಾನದಲ್ಲಿರುವ ಸತ್ಯೇಂದರ್​ ಜೈನ್​ ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು ಒಂದು ವೇಳೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಆದ ಕಾರಣ ಅವರಿಗೆ ಜಾಮೀನು ನೀಡಬಾರದು ಎಂದು ED ಪರ ವಕೀಲರು ಔಆದ ಮಂಡಿಸಿದ್ದರು.
ಮೇ 30,2022ರಂದು ಸತ್ಯೇಂದರ್​ ಜೈನ್​ ಒಡೆತನದ ಕಂಪನಿಗಳಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಎಎಪಿ ನಾಯಕನನ್ನು ವಶಕ್ಕೆ ಪಡೆದಿತ್ತು,
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
