ಚಂಡೀಗಢ:ದೇಶದ ಅತ್ಯಂತ ಶ್ರೀಮಂತ ಮಹಿಳೆ ಎಂದೇ ಖ್ಯಾತಿ ಪಡೆದಿರುವ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.
ಇದನ್ನೂ ಓದಿ:ವಕೀಲರನ್ನು ಬಂಧಿಸಲು ಡ್ರಗ್ಸ್ ಕೇಸ್​..ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು!
ಅವರ ಪುತ್ರ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಕುರುಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ.
ಆದರೆ ಸಾವಿತ್ರಿ ಹಲವು ವರ್ಷ ಕಾಂಗ್ರೆಸ್ ನಲ್ಲೇ ಇದ್ದರು. ಕುಟುಂಬ ಸದಸ್ಯರ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬುಧವಾರ ತಡರಾತ್ರಿ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ತೊರೆದು ಗುರುವಾರ ಬಿಜೆಪಿ ಸೇರುವುದಾಗಿ ಘೋಷಿಸಿದರು.
ನನ್ನ ಕುಟುಂಬದ ಸದಸ್ಯರ ಸಲಹೆ ಮೇರೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಸಾವಿತ್ರಿ ಪುತ್ರ ಮಾಜಿ ಸಂಸದ ನವೀನ್ ಜಿಂದಾಲ್ ಕೂಡ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಖ್ಯಾತ ಕೈಗಾರಿಕೋದ್ಯಮಿ ಮತ್ತು ಹರಿಯಾಣದ ಮಾಜಿ ಸಚಿವ ಓಪಿ ಜಿಂದಾಲ್ ಅವರ ಪುತ್ರ ನವೀನ್ ಈ ಬಾರಿ ಕುರುಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಬೆದರಿಸುವುದು ಕಾಂಗ್ರೆಸ್ ಸಂಸ್ಕೃತಿ: ಸಿಜೆಐಗೆ ವಕೀಲರ ಪತ್ರದ ಕುರಿತು ಪ್ರಧಾನಿ ಮೋದಿ ತಿರುಗೇಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 14 =
Remember me
