ತಿರುವನಂತಪುರ:ಕೇರಳದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಶರೋನ್ ರಾಜ್​ ಕೊಲೆ ಪ್ರಕರಣದ ಪ್ರಮುಖ ಆರೋಪಿ ಗ್ರೀಷ್ಮಾಳಿಗೆ ಸುಪ್ರೀಂಕೋರ್ಟ್​ ಶಾಕ್​ ನೀಡಿದೆ. ಕೊಲೆ ಪ್ರಕರಣದ ಅಂತಿಮ ವರದಿಯನ್ನು ವಜಾಗೊಳಿಸಬೇಕೆಂಬ ಗ್ರೀಷ್ಮಾಳ ಮನವಿಯನ್ನು ದೇಶದ ಉನ್ನತ ನ್ಯಾಯಾಲಯ ವಜಾಗೊಳಿಸಿದೆ. ಈ ತೀರ್ಪಿನಿಂದಾಗಿ ಗ್ರೀಷ್ಮಾಳಿಗೆ ತೀವ್ರ ಹಿನ್ನಡೆಯಾಗಿದೆ.
ಅಪರಾಧ ವಿಭಾಗದ ಡಿವೈಎಸ್ಪಿ ಅವರು ಈ ಪ್ರಕರಣದ ಅಂತಿಮ ವರದಿಯನ್ನು ತಮ್ಮ ನ್ಯಾಯವ್ಯಾಪ್ತಿ ಮೀರಿ ಸಲ್ಲಿಸಿದ್ದಾರೆ. ಆದರೆ, ಠಾಣಾಧಿಕಾರಿಗೆ ಮಾತ್ರ ಕಾನೂನು ಅಧಿಕಾರವಿದೆ ಎಂದು ಗ್ರೀಷ್ಮಾ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದ್ದಳು. ಇದಕ್ಕೆ ಉತ್ತರ ನೀಡಿರುವ ಸುಪ್ರೀಂಕೋರ್ಟ್​ ಗ್ರೀಷ್ಮಾಳ ಈ ವಾದವು ಅಸ್ತಿತ್ವದಲ್ಲಿ ಇಲ್ಲ ಎನ್ನುವ ಮೂಲಕ ಅರ್ಜಿ ತಿರಸ್ಕರಿಸಿದೆ.
ಪ್ರಕರಣದ ಅಂತಿಮ ತನಿಖಾ ವರದಿ ಮತ್ತು ಮುಂದಿನ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಗ್ರೀಷ್ಮಾ ಮತ್ತು ಆಕೆಯ ಸಂಬಂಧಿಕರು ಈ ಹಿಂದೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಸುಪ್ರೀಂಕೊರ್ಟ್​ನಲ್ಲಿಯೂ ತೀವ್ರ ಮುಖಭಂಗವಾಗಿದೆ. ಇದಕ್ಕೂ ಮೊದಲು ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಮನವಿಯನ್ನು ತಿರಸ್ಕರಿಸಿದ ನಂತರ ಗ್ರೀಷ್ಮಾ ಮತ್ತು ಆಕೆಯ ಸಹ ಆರೋಪಿ ತಾಯಿ ಸಿಂಧು ಮತ್ತು ಚಿಕ್ಕಪ್ಪ ನಿರ್ಮಲಾ ಕುಮಾರನ್ ನಾಯರ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸದ್ಯ ಆರೋಪಿ ಗ್ರೀಷ್ಮಾ ಜಾಮೀನಿನ ಮೇಲೆ ಹೊರಗಿದ್ದಾಳೆ. ಕಳೆದ ವರ್ಷ ಸೆಪ್ಟೆಂಬರ್​ 26ರಂದು ಕೇರಳ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ. ಆದರೆ, ಈ ಪ್ರಕರಣ ತನಿಖೆ ಮತ್ತು ವಿಚಾರಣೆ ಮುಂದುವರಿದಿದೆ.
ಏನಿದು ಪ್ರಕರಣ?ಕೇರಳದ ತಿರುವನಂತಪುರದಲ್ಲಿ 2022ರ ಅಕ್ಟೋಬರ್​ 25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ಅ.31 ರಂದು ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಳು. ಅ. 14ರಂದು ಶರೋನ್​ ರಾಜ್​ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್​, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟನು. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.
ಪ್ರಯತ್ನಗಳು ವಿಫಲವಾದ್ದರಿಂದ ಕೊಲೆಗ್ರೀಷ್ಮಾ 2022ರ ಮಾರ್ಚ್ 4ರಂದು ಯೋಧನೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಬಳಿಕ ಶರೂನ್​ ಜತೆ ತನ್ನ ಸಂಬಂಧವನ್ನು ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೂನ್​ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ.​ ಬಳಿಕ ನವೆಂಬರ್‌ನಲ್ಲಿ ಶರೋನ್ ಗ್ರೀಷ್ಮಾಳ ಮನೆಯಲ್ಲಿ ಮತ್ತು ನಂತರ ವೆಟ್ಟುಕಾಡ್ ಚರ್ಚ್‌ನಲ್ಲಿ ವಿವಾಹವಾದರು. ಇದಾದ ಬಳಿಕ ಥ್ರಿಪ್ಪರಪುವಿನಲ್ಲಿ ರೂಮ್​ ಬುಕ್​ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದರು. ಯೋಧನ ಜತೆ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೂನ್​ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್​ ಬ್ರೇಕಪ್​ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್​ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
ಸೆಕ್ಸ್​ಗಾಗಿ ಒತ್ತಾಯ2022ರ ಅಕ್ಟೋಬರ್​ 13ರಂದು ಇಬ್ಬರು 1 ಗಂಟೆ 7 ನಿಮಿಷಗಳ ಕಾಲ ಸೆಕ್ಸ್​ ಬಗ್ಗೆ ಮಾತನಾಡಿದ್ದಾರೆ. ಸೆಕ್ಸ್​ಗಾಗಿ ಒತ್ತಾಯ ಮಾಡುತ್ತಿದ್ದರಿಂದ ಅಕ್ಟೋಬರ್​ 14ರಂದು ನಾನು ಗ್ರೀಷ್ಮಾ ಮನೆಗೆ ಹೋದೆ ಎಂದು ಶರೂನ್​ ತನ್ನ ಸಂಬಂಧಿಕರ ಮುಂದೆ ಹೇಳಿಕೊಂಡಿದ್ದಾನೆ. ಆಯುರ್ವೇದಿಕ್​ ಔಷಧದಲ್ಲಿ ವಿಷ ಬೆರೆಸಿ ನೀಡಿ ಕೊಲೆ ಮಾಡಿದ್ದಾಳೆ. ಬಳಿಕ ಆತನೊಂದಿಗೆ ನಡೆಸಿದ್ದ ಚಾಟ್​ ಅನ್ನು ಗ್ರೀಷ್ಮಾ ಡಿಲೀಟ್​ ಮಾಡಿದ್ದಾಳೆ. ಅಳಿಸಿದ ಸಂದೇಶಗಳನ್ನು ಹಿಂಪಡೆಯಬಹುದೇ ಎಂದು ನೋಡಲು ಅವಳು ಹಲವಾರು ಬಾರಿ ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿಯೂ ಹುಡುಕಾಡಿದ್ದಾಳೆ.
ಶರೋನ್ ತನ್ನ ಸಾವಿನ ಹೇಳಿಕೆಯಲ್ಲೂ ತನ್ನ ಗೆಳತಿ ಗ್ರೀಷ್ಮಾಳನ್ನು ಅನುಮಾನಿಸಲಿಲ್ಲ. ಪಾರಸಾಲ ಪೊಲೀಸರು ಇದೊಂದು ಸಾಮಾನ್ಯ ಸಾವು ಎಂಬ ತೀರ್ಮಾನಕ್ಕೆ ಬಂದಿದ್ದರು. ಆದರೆ, ವಿಶೇಷ ತನಿಖಾ ತಂಡ ನಡೆಸಿದ ವಿಚಾರಣೆ ಹಾಗೂ ತನಿಖೆಯ ಬಳಿಕ ಗ್ರೀಷ್ಮಾ ಶರೋನ್‌ಗೆ ಜ್ಯೂಸ್‌ನಲ್ಲಿ ವಿಷ ನೀಡಿ ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಈ ಎಲ್ಲ ಅಂಶಗಳನ್ನು ಪೊಲೀಸರು ಚಾರ್ಜ್​ಶೀಟ್​ನಲ್ಲಿ ದಾಖಲಿಸಿದ್ದು, ನೆಯ್ಯಟ್ಟಿಂಕರ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಗ್ರೀಷ್ಮಾಳನ್ನು ರಕ್ಷಿಸಲು ತಾಯಿ ಮತ್ತು ಆಕೆಯ ಚಿಕ್ಕಪ್ಪ ಪ್ರಯತ್ನಿಸಿದ್ದಾರೆ ಎಂದು ಪೊಲೀಸರಿಗೆ ಗೊತ್ತಾದ ಬಳಿಕ ಅವರನ್ನೂ ಪ್ರಕರಣದಲ್ಲಿ ಬಂಧಿಸಲಾಗಿತ್ತು.(ಏಜೆನ್ಸೀಸ್​)
ಒಮ್ಮೆ ಪೊದೆಯಲ್ಲಿ ಬಟ್ಟೆ ಬದಲಾಯಿಸುವಾಗ… ಯುದ್ಧಕಾಂಡ ನಟಿಯ ಬದುಕಿಗೆ ತಿರುವು ನೀಡಿತು ಆ ಒಂದು ಘಟನೆ

ಶ್ರೀಮಂತರೇ ಈತನ ಟಾರ್ಗೆಟ್​! ಕದ್ದ ಹಣದಲ್ಲಿ ಗ್ರಾಮಕ್ಕೆ 7 ರಸ್ತೆ, ಬಡವರಿಗೆ ಚಿಕಿತ್ಸೆ, ಮದುವೆಗೆ ಸಹಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
