ನವದೆಹಲಿ:26 ವಾರಗಳ ಅವಧಿಯ ಗರ್ಭಪಾತಕ್ಕೆ ಅನುಮತಿ ನೀಡುವಂತೆ ವಿವಾಹಿತ ಮಹಿಳೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ನಾವು ಜೀವವೊಂದರ ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ. ಇದಕ್ಕೆ ಕೋರ್ಟ್‌ ಆದೇಶ ನೀಡಲು ಬರುವುದಿಲ್ಲ ಎಂದು ಹೇಳಿದೆ.
ಇದನ್ನೂ ಓದಿ:ಇನ್ಮುಂದೆ ಅನುಮತಿಯಿಲ್ಲದೆ ಕಾಲ್​ ರೆಕಾರ್ಡ್​ ಮಾಡುವುದು ಕಾನೂನು ಉಲ್ಲಂಘನೆ!
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಅವರು, ಮಹಿಳೆಯು ಗರ್ಭ ಧರಿಸಿ 26 ವಾರ ಮತ್ತು 5 ದಿನ ಆಗಿದೆ. ಈ ಸಮಯದಲ್ಲಿ ಗರ್ಭಪಾತಕ್ಕೆ ಅನುಮತಿಸುವುದು ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯ ಕಾಯ್ದೆಯ ಸೆಕ್ಷನ್ 3 ಮತ್ತು 5ರ ಉಲ್ಲಂಘನೆಯಾಗುತ್ತದೆ. ಏಕೆಂದರೆ ತಾಯಿಗೆ ಯಾವುದೇ ಅಪಾಯವಿಲ್ಲ ಮತ್ತು ಇದು ಮಗುವಿನ ಅಸಜಹತೆ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಗುವಿನಲ್ಲಿ ಯಾವುದೇ ಅಸಹಜತೆ ಇಲ್ಲ, ಆರೋಗ್ಯವಾಗಿದೆ ಎಂದು ಅಖಿಲ ಭಾರತ ವಿಜ್ಞಾನಗಳ ಸಂಸ್ಥೆ(ಎಐಎಮ್ ಎಸ್) ನೀಡಿರುವ ವರದಿಯನ್ನು ಅನುಮೋದಿಸಿ ತೀರ್ಪು ನೀಡಿದರು.
ಎಂಟಿಪಿ ಕಾಯ್ದೆಯಲ್ಲಿ ಅತ್ಯಾಚಾರಕ್ಕೆ ಒಳಪಟ್ಟವರು, ಅಂಗವಿಕಲರು, ಅಪ್ರಾಪ್ತ ವಯಸ್ಕರು ಮತ್ತು ವಿವಾಹಿತ ಮಹಿಳೆಯರಿಗೆ ಗರ್ಭಪಾತದ ಗರಿಷ್ಠ ಮಿತಿ 24 ವಾರಗಳಾಗಿವೆ. ಮಹಿಳೆ ತನ್ನ ಗರ್ಭಪಾತಕ್ಕೆ ಆದೇಶ ನೀಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎರಡು ಮಕ್ಕಳ ತಾಯಿಯಾಗಿರುವ ಆಕೆ ತಾನು ಖಿನ್ನತೆಯಿಂದ ಬಳಲುತ್ತಿದ್ದು, ಮಾನಸಿಕ ಅಥವಾ ಆರ್ಥಿಕವಾಗಿ ಮೂರನೇ ಮಗುವನ್ನು ಬೆಳೆಸುವ ಸ್ಥಿತಿಯಲ್ಲಿ ನಾನು ಇಲ್ಲ. ಹೀಗಾಗಿ ಗರ್ಭಾಪಾತಕ್ಕೆ ಅನುಮತಿ ನೀಡಬೇಕು ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅ.9 ರಂದು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಈ ಹಿಂದೆ ಇದೇ ವಿಚಾರವಾಗಿ ವಿಭಿನ್ನ ತೀರ್ಪನ್ನು ನೀಡಿತ್ತು. ಆದ್ದರಿಂದ ಈ ಪ್ರಕರಣ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಮುಂದೆ ಬಂದಿತ್ತು. ಈ ಹಿಂದೆಯೇ ಮಹಿಳೆ ಗರ್ಭಪಾತಕ್ಕೆ ಏಕೆ ಅನುಮತಿ ಪಡೆಯಲಿಲ್ಲ ಎಂದು ಕೋರ್ಟ್‌ ಪ್ರಶ್ನಿಸಿತು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + six =
Remember me
