ಲಖನೌ:ಹದಿನೈದು ವರ್ಷದ ಶಾಲಾ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಶಾಲೆಯ ಮ್ಯಾನೇಜರ್​ನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್​ಪುರ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಗೋಲಾ ಏರಿಯಾದಲ್ಲಿರುವ ಅಭಿಯೊದಯ್​ ಇಂಟರ್​ ಕಾಲೇಜ್ ರಾಜ್​ಗಢ ಬಳಿ​ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬಂಧಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಇತ್ತೀಚೆಗೆ ಮೃತಪಟ್ಟ ಯುವನಟನ ಶವಪರೀಕ್ಷೆ ಯಾಕೆ ಮಾಡ್ಲಿಲ್ಲ?: ಸ್ಯಾಂಡಲ್ವುಡ್​ ರಹಸ್ಯ ಬಿಚ್ಚಿಟ್ಟ ಇಂದ್ರಜಿತ್​!
ದೂರಿನಲ್ಲಿರುವಂತೆ ಆರೋಪಿಯು ಆರ್​ಎಂ ಪಬ್ಲಿಕ್​ ಸ್ಕೂಲ್​ ಮ್ಯಾನೇಜರ್​ ಆಗಿದ್ದು, ಜುಲೈ 30 ರಂದು ಏಳನೇ ತರಗತಿ ವಿದ್ಯಾರ್ಥಿನಿಯನ್ನು ಗೋಲಾ ಏರಿಯಾದಲ್ಲಿರುವ ತನ್ನ ಮನೆಗೆ ಕರೆದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ವಿಡಿಯೋ ರೆಕಾರ್ಡ್​ ಮಾಡಿಕೊಂಡು ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಕೊನೆಗೊಂದು ದಿನ ವಿದ್ಯಾರ್ಥಿನಿ ತಮ್ಮ ಕುಟುಂಬಕ್ಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ತಕ್ಷಣ ಎಚ್ಚೆತ್ತ ಪಾಲಕರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ಮೇಲೆ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.(ಏಜೆನ್ಸೀಸ್​)
ಬ್ರೇಕಿಂಗ್ ನ್ಯೂಸ್: ‘ಅಪಘಾತದ ವೇಳೆ ನಟಿ ಶರ್ಮಿಳಾ ಮಾಂಡ್ರೆ ಪಕ್ಕದಲ್ಲೇ ಕುಳಿತ್ತಿದ್ದ ಡ್ರಗ್ಸ್ ಪೆಡ್ಲರ್’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
