ಪುಣೆ:ಮಕ್ಕಳಿಗೆ ಕ್ರೈಸ್ತ ಧರ್ಮದ ಪ್ರಾರ್ಥನೆಗಳನ್ನು ಓದಲು ಒತ್ತಾಯ ಮಾಡುತ್ತಿದ್ದ ಎಂಬ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲನಿಗೆ ಥಳಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಡಿ.ವಾಯ್​. ಪಾಟೀಲ್​ ಶಾಲೆಯ ಪ್ರಾಂಶುಪಾಲನಾಗಿರುವ ಅಲೆಕ್ಸಾಂಡರ್ ಮೇಲೆ ಹಲ್ಲೆ ನಡೆಸಲಾಗಿದ್ದು​, ಮಕ್ಕಳಿಗೆ ಬಲವಂತವಾಗಿ ಕ್ರಿಶ್ಚಿಯನ್ ಪ್ರಾರ್ಥನೆ ಓದುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ ನಂತರ ಈ ಘಟನೆ ನಡೆದಿದೆ.ಇದನ್ನೂ ಓದಿ:ಸದನದಲ್ಲಿ ಕೋಲಾಹಲ ಎಬ್ಬಿಸಿದ ಮಂಡ್ಯ ಚಾಲಕನ ಆತ್ಮಹತ್ಯೆ ಯತ್ನ ಕೇಸ್​: ಸರ್ಕಾರಕ್ಕೆ ಎಚ್​ಡಿಕೆ, ಬೊಮ್ಮಾಯಿ ಚಾಟಿಹಲವಾರು ಪೋಷಕರು, ಹಿಂದೂ ಹಬ್ಬಗಳಿಗೆ ವಿದ್ಯಾರ್ಥಿಗಳಿಗೆ ರಜೆ ನೀಡಿಲ್ಲ ಮತ್ತು ಕ್ರಿಶ್ಚಿಯನ್​​ ಸಂಬಂಧಿತ ಪ್ರಾರ್ಥನೆಯನ್ನು ಓದುವಂತೆ ಮಕ್ಕಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಹಲವು ಹಿಂದೂ ಕಾರ್ಯಕರ್ತರು, ಹುಡುಗಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಆರೋಪಿಸಿದ್ದಾರೆ.ಆದರೆ ಶಾಲೆಯ ಆಡಳಿತ ಮಂಡಳಿ ಈ ಎಲ್ಲ ಆರೋಪಗಳನ್ನು ನಿರಾಕರಿಸಿದ್ದು, ಪ್ರಾಂಶುಪಾಲನನ್ನು ಅಮಾನತುಗೊಳಿಸಿ ರಜೆ ಮೇಲೆ ಕಳುಹಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 13 =
Remember me
