ಬಾಲಸೋರ್‌:ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ದೇಹಗಳನ್ನು ಇರಿಸಿದ್ದ ಸರ್ಕಾರಿ ಶಾಲೆಯನ್ನು ಕೆಡವಲು  ಶಾಲಾ ಆಡಳಿತ ಮುಂದಾಗಿದೆ.
ರೈಲು ಅಪಘಾತದ ನಂತರ ಬಾಲಸೋರ್‌ನ ಸರ್ಕಾರಿ ಬಹನಾಗಾ ಪ್ರೌಢಶಾಲೆಯಲ್ಲಿ ಮೃತದೇಹಗಳನ್ನು ಇರಿಸಿ ತಾತ್ಕಾಲಿಕ ಶವಾಗಾರವಾಗಿ ಮಾಡಲಾಗಿತ್ತು. ಅನೇಕ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಶಾಲೆಯ ಆವರಣಕ್ಕೆ ಮರಳಲು ಹಿಂದೇಟು ಹಾಕಿದ್ದರಿಂದ ಶಾಲಾ ಆಡಳಿತ ಸಮಿತಿಯು ಶಾಲಾ ಕಟ್ಟಡವನ್ನು ನೆಲಸಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಶಾಲೆಗೆ ವಿದ್ಯಾರ್ಥಿಗಳು ಬರಲು ಹಿಂಜರಿಯುತ್ತಿದ್ದು, ಕಿರಿಯ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯಿನಿ ಹೇಳಿದ್ದಾರೆ.
ಇದನ್ನೂ ಓದಿ:ಸ್ವಿಮ್ಮಿಂಗ್​​ ಮಾಡ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿ ನೀರೊಳಗೆ ಎಳೆದೊಯ್ದ ಶಾರ್ಕ್​! ವಿಡಿಯೋ ವೈರಲ್​
ನಿನ್ನೆ ಶಾಲೆಗೆ ಭೇಟಿ ನೀಡಿದ್ದ ಬಾಲಸೋರ್ ಜಿಲ್ಲಾಧಿಕಾರಿ ದತ್ತಾತ್ರಯ ಭೌಸಾಹೇಬ್ ಶಿಂಧೆ, ಶಾಲಾ ಆಡಳಿತ ಸಮಿತಿ ಸದಸ್ಯರು, ಮುಖ್ಯೋಪಾಧ್ಯಾಯಿನಿ, ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರನ್ನು ಭೇಟಿ ಮಾಡಿದ್ದರು. ಸುಮಾರು 65 ವರ್ಷಗಳ ಹಳೆ ಕಟ್ಟಡವನ್ನು ಕೆಡವಿ, ಮಕ್ಕಳಿಗೆ ಭಯವಾಗದಂತೆ ನವೀಕರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಜೂನ್ 2ರಂದು ಸಂಭವಿಸಿದ ಭೀಕರ ಅಪಘಾತದಲ್ಲಿ 288 ಜನರು ಮೃತಪಟ್ಟಿದ್ದರು ಮತ್ತು 1,100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅಪಘಾತದ 51 ಗಂಟೆಗಳ ನಂತರ ಭಾನುವಾರ ತಡರಾತ್ರಿ ಮತ್ತೆ ರೈಲು ಸಂಚಾರ ಪುನರಾರಂಭವಾಗಿತ್ತು.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − eight =
Remember me
