ಮುಂಬೈ:ಕುರುಕಲು ತಿಂಡಿ ಹೆಚ್ಚು ತಿನ್ನಬೇಡ ಎಂದು ಪೋಷಕರು ಬೈದು ಬುದ್ದಿವಾದ ಹೇಳಿದ್ದಕ್ಕೆ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ನಾಗ್ಪುರದ ವಿನೋದ್ ಧನ್ವಾನಿ ನಗರದ ಸಿಂಧಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಭೂಮಿಕಾ (19) ಎಂದು ಗುರುತಿಸಲಾಗಿದೆ. ಈಕೆ ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ (BBA) ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಹನುಮಾನ್​ ಚಾಲೀಸಾ ಪ್ರಕರಣ; ಯಾವ ಪುರುಷಾರ್ಥಕ್ಕಾಗಿ ಪ್ರತಿಭಟನೆ ಎಂದ ದಿನೇಶ್​ ಗುಂಡೂರಾವ್
ಈ ಕುರಿತು ಪ್ರತಿಕ್ರಿಯಿಸಿರುವ ನಾಗ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಭೂಮಿಕಾ ಬಿಬಿಎ ವಿದ್ಯಾರ್ಥಿನಿಯಾಗಿದ್ದು, ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಕುರುಕಲು ತಿಂಡಿ ಹೆಚ್ಚು ತಿನ್ನಬೇಡ ಎಂದು ತಂದೆ ಬೈದಿದ್ದಕ್ಕೆ ಮನನೊಂದು ಅಡುಗೆ ಮನೆಯಲ್ಲಿ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಡುಗೆ ಮನೆಯಲ್ಲಿ ಮಗಳು ನೇಣು ಬಿಗಿದುಕೊಂಡಿರುವುದನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಆಕೆಯನ್ನು ನಾಗ್ಪುರ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾರ್ಗಮಧ್ಯೆಯೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ನಾಗ್ಪುರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + 12 =
Remember me
