ಚಂಡೀಗಢ:ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಹಲವು ದಿನಗಳಿಂದ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.
ಮಹಿಳಾ ಕುಸ್ತಿಪಟುಗಳಿಗೆ ಕ್ರೀಡಾ ಕ್ಷೇತ್ರದ ಗಣ್ಯರು, ರಾಜಕೀಯ ನಾಯಕರು, ರೈತ ಸಂಘಟನೆಗಳು ಬೆಂಬಲ ಘೋಷಿಸಿದ್ದು ಪ್ರತಿಭಟನಾ ನಿರತರ ಜೊತೆ ದನಿ ಗೂಡಿಸಿದ್ದಾರೆ.
#WATCH| Scuffle breaks out between the members of Khap panchayat during their meeting in support of wrestlers’ protest in Kurukshetra, Haryanapic.twitter.com/Nj15aQgxZ9— ANI (@ANI)June 2, 2023

#WATCH| Scuffle breaks out between the members of Khap panchayat during their meeting in support of wrestlers’ protest in Kurukshetra, Haryanapic.twitter.com/Nj15aQgxZ9
ಇದನ್ನೂ ಓದಿ:ಕುಸ್ತಿಪಟುಗಳು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: 1983ರ ವಿಶ್ವಕಪ್ ವಿಜೇತ ತಂಡ
ಇನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸುವ ಕುರಿತಾಗಿ ನಡೆದ ಸಭೆಯಲ್ಲಿ ಪಂಚಾಯತ್​ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಖಾಪ್​ ಎಂಬ ಪ್ರದೇಶದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸದಸ್ಯರು ಮಾತಿನ ಯುದ್ದದಲ್ಲಿ ತೊಡಗಿರುವುದು ಕಂಡು ಬರುತ್ತದೆ.
ಪಂಚಾಯತ್​ ಸದಸ್ಯರ ನಡುವಿನ ಗಲಾಟೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಭೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಿದ್ದರು ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲವನ್ನು ಸೂಚಿಸಿದ್ದಾರೆ. ಕುಸ್ತಿ ಫೆಡರೇಷನ್​ ಅಧ್ಯಕ್ಷ, ಬಿಜಪೆಇ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ವಿರುದ್ಧ ರಾಷ್ಟ್ರಪತಿಯನ್ನು ಭೇಟಿ ಮಾಡಿ ದೂರು ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
