ಕೋಲ್ಕತ:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಇನ್ನೂ ಹಲವು ತಿಂಗಳುಗಳು ಬಾಕಿಯಿವೆ. ರಾಜ್ಯದಲ್ಲಿ ಈಗಾಗಲೇ ರಾಜಕೀಯ ಹೋಯ್ದಾಟಗಳು ಹೆಚ್ಚಾಗಿವೆ. ಟಿಎಂಸಿ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗಿವೆ. ಹೀಗಿರುವಾಗ ಟಿಎಂಸಿಗೆ ಎರಡನೇ ಬಾರಿಗೆ ಬಿಜೆಪಿ ಬೆದರಿಕೆ ನೀಡಿದೆ.
ಇದನ್ನೂ ಓದಿ:ಎರಡನೇ ಮಗುವಿಗೆ ಜನ್ಮ ನೀಡುವ ತಾಯಿಗೆ ಸರ್ಕಾರದಿಂದ 6 ಸಾವಿರ ರೂಪಾಯಿ
ರಾಜ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಹೆಚ್ಚಾಗುತ್ತಿವೆ. ಒಂದು ವೇಳೆ ಹಲ್ಲೆ ಮುಂದುವರಿದರೆ ಅದಕ್ಕೆ ತಕ್ಕ ಪಾಠ ಕಲಿಸಲಾಗುವುದು. ನಾವು ಯಾರದ್ದೂ ಕೈ ಕಾಲು ಮುರಿಯಲು ಹೋಗುವುದಿಲ್ಲ. ಆದರೆ ಮುಂದಿನ ಚುನಾವಣೆಗೆ ಕೇಂದ್ರೀಯ ಪಡೆಯನ್ನು ಕರೆಸಲಿದ್ದೇವೆ. ಅನ್ಯಾಯ ಮಾಡುವವರಿಗೆ ಕೇಂದ್ರೀಯ ಪಡೆ ತಕ್ಕ ಶಿಕ್ಷೆ ನೀಡಲಿದೆ ಎಂದು ರಾಜ್ಯದ ಬಿಜೆಪಿ ಮುಖ್ಯಸ್ಥ ದಿಲೀಪ್​ ಘೋಷ್​ ಹೇಳಿದ್ದಾರೆ.
ನನ್ನ ಕಾರನ್ನು ಗುರಿಯಾಗಿ ಹಲ್ಲೆ ಮಾಡಲಾಗುತ್ತಿದೆ. ನಮ್ಮ 120 ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಇದೇ ರೀತಿ ಮುಂದುವರಿದರೆ ಅದಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸಲೇಬೇಕಾಗುತ್ತದೆ. ರಾಜ್ಯದಲ್ಲಿ ಪ್ರತಿನಿತ್ಯ ಬಾಂಬ್​ ಸ್ಫೋಟವಾಗುತ್ತಿದೆ. ಕಾರ್ಯಕರ್ತರ ಮೇಲೆ ಹಲ್ಲೆಯಾಗುತ್ತಿದ್ದರೂ ಟಿಎಂಸಿ ಸರ್ಕಾರ ಏನೂ ಕ್ರಮ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿದೆ ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ:ಈ ನಗರದಲ್ಲಿ ಇನ್ನು ಸೂರ್ಯ ಹುಟ್ಟೋದು 2021ರಲ್ಲಿಯೇ!
ಈ ಹಿಂದೆಯೂ ಒಮ್ಮೆ ದಿಲೀಪ್​ ಅವರು ಟಿಎಂಸಿಗೆ ಸಾರ್ವಜನಿಕ ಬೆದರಿಕೆ ಹಾಕಿದ್ದರು. ಆರು ತಿಂಗಳಲ್ಲಿ ಟಿಎಂಸಿ ಕಾರ್ಯಕರ್ತರು ಬದಲಾಗದಿದ್ದರೆ ಅವರ ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. (ಏಜೆನ್ಸೀಸ್​)
ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್​ 370 ವಾಪಾಸು ತರಲು ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ; ಬಿಜೆಪಿ

ಕಸಿನ್​ಗಳ ಮದುವೆ ಕಾನೂನು ಬಾಹಿರ; ಹರಿಯಾಣ, ಪಂಜಾಬ್​ ಹೈ ಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + five =
Remember me
