ರಾಂಚಿ:ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಕಠಿಣ ಕಾನೂನಿನ ಅವಶ್ಯಕತೆಯಿದೆ. ಇದರ ನಡುವೆ ಭಾರತ ದಂಡ ಸಂಹಿತೆ(IPC Section) 498A ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ ಎಂದು ಜಾರ್ಖಂಡ್​ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.
ಕೌಟುಂಬಿಕ ಕಲಹ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾಯಮೂರ್ತಿ ಸಂಜಯ್​ ಕುಮಾರ್​ ದ್ವಿವೇದಿ ಅವರಿದ್ದ ಏಕಸದಸ್ಯ ಪೀಠವು ಸುಪ್ರೀಂ ಕೋರ್ಟ್​ ಸೇರಿದಂತೆ ಹಲವು ನ್ಯಾಯಾಲಯಗಳು 498A ಕಾನೂನು ದುರ್ಬಳಕೆ ಆಗಿರುವುದನ್ನು ಗಮನಿಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಒಂದು ನಿಮಿಷ ತಡವಾಗಿದ್ದಕ್ಕೆ ರಾಜ್ಯಪಾಲರನ್ನೇ ಬಿಟ್ಟು ಹಾರಿದ ವಿಮಾನ
498A ಕಾನೂನನ್ನು ಜಾರಿಗೆ ತಂದಿರುವುದು ಮದುವೆಯೊಳಗಿನ ಕಿರುಕುಳದಿಂದ ಮಹಿಳೆಯರನ್ನು ರಕ್ಷಿಸಲು ಈ ನಿರ್ದಿಷ್ಟ ನಿಬಂಧನೆಯನ್ನು ಪರಿಚಯಿಸಲಾಗಿದೆ. ಅದಾಗ್ಯೂ ಅದರ ದುರುಪಯೋಗವು ಕಳವಳಕಾರಿ ವಿಚಾರವಾಗಿದ್ದು, ಅನೇಕ ಗಂಡಂದರಿಗೆ ಇದರ ಮೂಲಕ ಅನ್ಯಾಯವಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ಈ ಕಾನೂನನ್ನು ಬಳಸಿಕೊಂಡು ಪತಿ, ಅತ್ತೆ, ಮಾವನನ್ನು ಕ್ಷುಲಕ ಕಾರಣಕ್ಕೆ ಸಿಲುಕಿಸುತ್ತಿದ್ದಾರೆ. ಈ ರೀತಿಯ ಕಾನೂನು ದುರುಪಯೋಗವು ಅನೇಕ ಕುಟುಂಬಗಳ ಮೇಲೆ ದುಷ್ಪರಿಣಾಮ ಬೀರಿದೆ. ಇದು ಸಾಮಾಜಿಕ ಮತ್ತು ಭಾವನಾತ್ಮಕ ಯಾತನೆಗೆ ಕಾರಣವಾಗುತ್ತಿದೆ ಎಂದು ನ್ಯಾಯಮೂರ್ತಿ ಸಂಜಯ್​ ಕುಮಾರ್​ ದ್ವಿವೇದಿ ಅವರಿದ್ದ ಏಕಸದಸ್ಯ ಪೀಠವು ಅಭಿಪ್ರಾಯಪಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
