ನವದೆಹಲಿ:ಹೊಸ ಸಂಸತ್​ ಭವನದ ಮೊದಲ ದಿನದಂದು ಸಂಸದರಿಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳಲ್ಲಿ “ಜಾತ್ಯಾತೀತ” ಮತ್ತು “ಸಮಾಜವಾದಿ” ಎಂಬ ಪದಗಳನ್ನು ಸಂವಿಧಾನದ ಪೀಠಿಕೆಯಲ್ಲಿ ತೆಗೆಯಲಾಗಿದೆ ಎಂದು ಕಾಂಗ್ರೆಸ್​ ನಾಯಕ ಅಧಿರ್​ ರಂಜನ್​ ಚೌಧರಿ, ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ನಾವು ಇಂದು ಹೊಸ ಸಂಸತ್ ಭವನದಲ್ಲಿ ಕಾಲಿಡುವಾಗ ನೀಡಿದ ಸಂವಿಧಾನದ ಪ್ರತಿಯ ಪೀಠಿಕೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಪದಗಳಿಲ್ಲ. ಈ ಎರಡು ಪದಗಳು ಸಂವಿಧಾನದಲ್ಲಿ ಇಲ್ಲದಿದ್ದರೆ, ಅದು ಆತಂಕಕಾರಿ ಸಂಗತಿಯಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್​ ರಂಜನ್​ ಚೌಧರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸರ್ಕಾರವು ಈ ಬದಲಾವಣೆಯನ್ನು ಅತ್ಯಂತ “ಬುದ್ಧಿವಂತಿಕೆಯಿಂದ” ಮಾಡಿದೆ ಮತ್ತು ಅವರ ಉದ್ದೇಶವೇ ಒಂದು “ಸಮಸ್ಯೆ” ಎಂದು ಆರೋಪಿಸಿದರು. ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ಬಯಸಿದ್ದೇನೆ. ಆದರೆ, ಅದಕ್ಕೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಚೌಧರಿ ಹೇಳಿದರು.
ಇದನ್ನೂ ಓದಿ:ಹೈಪರ್‌ಥೈಮೀಸಿಯಾ ಸುತ್ತ ದ್ವಂದ್ವ; ಪೊಲಿಟಿಕಲ್ ಡ್ರಾಮ, ಸೈನ್ಸ್ ಫಿಕ್ಷನ್ ಟ್ರೇಲರ್ ಬಿಡುಗಡೆ
ಆದರೆ, ಮಂಗಳವಾರ ಮುಂಜಾನೆ ಚೌಧರಿ ಅವರು ಸಂಸತ್ತಿನಲ್ಲಿ ಸಂವಿಧಾನದ ಪೀಠಿಕೆಯನ್ನು ಓದುತ್ತಿದ್ದರು. ಗಮನಾರ್ಹ ಸಂಗತಿ ಏನೆಂದರೆ, ಅವರು ಮುನ್ನುಡಿಯನ್ನು ಓದುವಾಗ “ಸಮಾಜವಾದಿ” ಮತ್ತು “ಜಾತ್ಯಾತೀತ” ಪದಗಳನ್ನು ಓದಿದರು. ಆದರೆ, ಈಗ ಈ ಎರಡು ಪದಗಳಿಲ್ಲ ಎಂಬ ಆರೋಪವನ್ನು ಮಾಡಿದ್ದಾರೆ.
ಮಂಗಳವಾರ ನೂತನ ಸಂಸತ್ ಭವನದ ಮೊದಲ ದಿನದಂದು ಸಂಸತ್ತಿನ ಸದಸ್ಯರಿಗೆ ಭಾರತದ ಸಂವಿಧಾನದ ಪ್ರತಿ, ಸಂಸತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಸ್ವೀಕರಿಸಿದರು. ನೂತನ ಸಂಸತ್​ ಸಂಕೀರ್ಣವನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಎರಡನೇ ದಿನದ ವಿಶೇಷ ಸಂಸತ್ ಅಧಿವೇಶನ ಹೊಸ ಕಟ್ಟಡದಲ್ಲಿ ನಡೆಯಿತು.(ಏಜೆನ್ಸೀಸ್​)
ಎಚ್​.ಡಿ. ಕೋಟೆಯಲ್ಲಿ ಬಾಲಕನನ್ನು ಕೊಂದು ತಿಂದು ಆತಂಕ ಸೃಷ್ಟಿಸಿದ್ದ ಹುಲಿ ಕೊನೆಗೂ ಸೆರೆ

ತ.ನಾಡಿಗೆ ಬಿಡಲು ನಮ್ಮಲ್ಲಿ ನೀರೇ ಇಲ್ಲ; ದೆಹಲಿ ಸಭೆಯಲ್ಲಿ ಸಿಎಂ ಉವಾಚ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 3 =
Remember me
