ಹೈದರಾಬಾದ್:ಬಹುಮಹಡಿ ಕಟ್ಟಡದಲ್ಲಿದ್ದ ಹೋಟೆಲ್​​​ನಲ್ಲಿ ಕಾಣಿಸಿಕೊಂಡ ಬೆಂಕಿ ಅವಘಡದಿಂದ ಮಹಿಳೆ ಸೇರಿದಂತೆ ಎಂಟು ಜನರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಿಕಂದರಾಬಾದ್​​ನಲ್ಲಿ ನಡೆದಿದೆ.
ಅವಘಡ ಸಂಭವಿಸಿದ ಸಮಯದಲ್ಲಿ ಸುಮಾರು 20-25 ಮಂದಿ ಹೋಟೆಲ್​​ನಲ್ಲಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಕಿಟಕಿಯ ಮೂಲಕ ಹೊರಜಿಗಿಯಲು ಯತ್ನಿಸಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿದೆ.
ಹೋಟೆಲ್​ ಇದ್ದ ಬಹುಮಹಡಿ ಕಟ್ಟಡದ ಕೆಳ ಭಾಗದಲ್ಲಿ ಇಲೆಕ್ಟ್ರಿಕ್​ ಸ್ಕೂಟರ್ ಶೋರೂಮ್ ಇತ್ತು. ಇಲ್ಲಿ ಉಂಟಾಗಿರುವ ಅವಘಡದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಶೋರೂಂನಲ್ಲಿದ್ದ ಇಲೆಕ್ಟ್ರಿಕ್ ವಾಹನದ ಬ್ಯಾಟರಿಯಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಬೇಗನೆ ಜ್ವಾಲೆಯ ರೂಪದಲ್ಲಿ ಹೋಟೆಲ್​ನ್ನು ಆವರಿಸಿಕೊಂಡಿದೆ. ರಾತ್ರಿ 9.30ರ ವೇಳೆಗೆ ಅಗ್ನಿಶಾಮಕ ಇಲಾಖೆಗೆ ಕರೆ ಬಂದಿದೆ. ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ತೆರಳಿ ರಕ್ಷಣಾಕಾರ್ಯ ಆರಂಭಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕನೇ ಅಂತಸ್ಥಿಗೆ ತೆರಳಿ 9 ಜನರನ್ನು ರಕ್ಷಸಿದ್ದಾರೆ. ಗಾಯ ಗೊಂಡವರನ್ನು ಗಾಂಧಿ ಆಸ್ಪತ್ರೆ ಮತ್ತು ಯಶೋಧಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹಿರಿಯ ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.(ಏಜೆನ್ಸೀಸ್)
Saddened by the loss of lives due to a fire in Secunderabad, Telangana. Condolences to the bereaved families. May the injured recover soon. Rs. 2 lakh from PMNRF would be paid to the next of kin of each deceased. Rs. 50,000 would be paid to the injured: PM@narendramodi— PMO India (@PMOIndia)September 13, 2022
Saddened by the loss of lives due to a fire in Secunderabad, Telangana. Condolences to the bereaved families. May the injured recover soon. Rs. 2 lakh from PMNRF would be paid to the next of kin of each deceased. Rs. 50,000 would be paid to the injured: PM@narendramodi
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
