ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್​ನಲ್ಲಿ ಶನಿವಾರ ನಸುಕಿನ ವೇಳೆ ಭದ್ರತಾ ಪಡೆಗಳ ಉಗ್ರ ನಿಗ್ರಹ ಕಾರ್ಯಾಚರಣೆಗೆ ಮೂವರು ಉಗ್ರರು ಹತರಾಗಿದ್ದಾರೆ. ಈ ನಡುವೆ, ಪ್ರತ್ಯೇಕ ಘಟನೆಯಲ್ಲಿ ಪಾಕಿಸ್ಥಾನದ ಸೇನಾ ಪಡೆ ಪೂಂಛ್​ ಸಮೀಪ ಗಡಿ ನಿಯಂತ್ರಣ ರೇಖೆ ಸಮೀಪ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಗೆ ಮೂವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಭದ್ರತಾ ಪಡೆಗಳು ಶೋಪಿಯಾನ್​ನ ಅಂಶಿಪೋರಾ ಪ್ರದೇಶದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ, ಉಗ್ರರು ಗುಂಡಿನ ದಾಳಿ ನಡೆಸಲಾರಂಭಿಸಿದರು. ಪರಿಣಾಮ ಸೇನೆ ಕೂಡ ಪ್ರತಿದಾಳಿ ನಡೆಸಿತ್ತು. ಈ ಪ್ರತಿದಾಳಿಯ ಪರಿಣಾಮ ಮೂವರು ಉಗ್ರರು ಹತರಾಗಿದ್ದಾರೆ.
ಇದನ್ನೂ ಓದಿ:ಮಕ್ಕಳಲ್ಲಿ ನಾಯಕತ್ವ ಲಕ್ಷಣಗಳನ್ನು ಬೆಳೆಸುವ ಬಗೆ
ಗಡಿಭಾಗದಲ್ಲಿ ಪೂಂಛ್​ನ ಸಮೀಪ ಗಡಿ ನಿಯಂತ್ರನ ರೇಖೆ ಬಳಿ ಖಾರಿ ಕರ್ಮಾರಾ ಸೆಕ್ಟರ್​ನಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಶೆಲ್ ದಾಳಿ ನಡೆಸಿದ ವೇಳೇ ಅದು ಮನೆಗೆ ಬಡಿದು, ಅದರೊಳಗಿದ್ದ ತಂದೆ, ತಾಯಿ, ಮಗ ಮೃತಪಟ್ಟಿದ್ದಾರೆ. ಈ ದಾಳಿ ಶುಕ್ರವಾರ ಸಂಜೆ 7.20ಕ್ಕೆ ನಡೆದಿತ್ತು. ಈ ವರ್ಷ ಜನವರಿಂದೀಚೆಗೆ ಇಲ್ಲಿ ತನಕ ಪಾಕಿಸ್ತಾನ 2,400 ಸಲ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ. (ಏಜೆನ್ಸೀಸ್)
ಸಿಎಂ ಯೋಗಿ ಕಚೇರಿ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆತ್ನಿಸಿದ ಅಮೇಠಿಯ ತಾಯಿ-ಮಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
