ಶ್ರೀನಗರ:ಕುಷ್ವಾರ ಸೆಕ್ಟರ್​ನಲ್ಲಿ ನಡೆದ ಕಾರ್ಯಾಚರಣೆ ವೇಳೆ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಕುಪ್ವಾರಾ ಪೊಲೀಸರು ನೀಡಿದ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಮಚ್ಚಲ್ ಸೆಕ್ಟರ್‌ನಲ್ಲಿ ಎಲ್‌ಒಸಿಯ ಮೂಲಕ ಒಳನುಸುಳುವಿಕೆಗೆ ಯತ್ನಿಸಿದವರನ್ನು ಎನ್​ಕೌಂಟರ್ ಮಾಡಲಾಗಿದೆ. ಇದುವರೆಗೆ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಪೊಲೀಸರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#WATCH| Jammu and Kashmir: Visuals from RS Pura sector where an explosion is heard after Pak Rangers started unprovoked firing on BSF posts in Arnia area in violation of the ceasefire.https://t.co/wgZISa5VJ9pic.twitter.com/DUz9QJKU6i
ಇದನ್ನೂ ಓದಿ:ಹುಲಿ ಉಗುರು ಪ್ರಕರಣ; ಪ್ರಭಾವಿ ಬಿಜೆಪಿ ನಾಯಕನ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ
ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯ ಕೆಲವೇ ಘಂಟೆಗಳ ನಂತರ ಅರ್ನಿಯಾ ಸೆಕ್ಟರ್‌ನಲ್ಲಿ ಉಗ್ರರು ಕದನ ವಿರಾಮ ಉಲ್ಲಂಘಿಸಿ ಒಳನುಸುಳಲು ಯತ್ನಿಸಿದ್ದಾರೆ. ಮೃತ ಭಯೋತ್ಪಾದಕರು ಲಷ್ಕರ್​-ಇ-ತೋಯ್ಬಾ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.
ಅಕ್ಟೋಬರ್ 26 ರಂದು ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ. ಕುಪ್ವಾರಾ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
