ಮುಂಬೈ:ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಸಲ್ಮಾನ್​ ಖಾನ್​ ಹಾಗೂ ಅವರ ತಂದೆ ಸಲೀಂ ಖಾನ್​ಗೆ ಭಾರೀ ಭದ್ರತೆ ನೀಡಲಾಗಿದೆ.ಪಂಜಾಬಿ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್​ ನಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್​ ಖಾನ್​​ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು, ಈ ಬೆನ್ನಲ್ಲೇ ಸೋಮವಾರ ಬೆದರಿಕೆ ಪತ್ರಗಳು ಬಂದಿದ್ದವು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈ ಪೊಲೀಸರು ಕೂಡಲೇ ಸಲ್ಮಾನ್ ನಿವಾಸಕ್ಕೆ ಭೇಟಿ ನೀಡಿದ್ದು, ಅವರಿಗೆ ಭದ್ರತೆಯನ್ನೂ ಹೆಚ್ಚಿಸಿದ್ದಾರೆ. ಈ ನಡುವೆ ಅವರ ತಂದೆ ಸಲೀಂ ಖಾನ್​ಗೂ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇದಕ್ಕೆ ಕಾರಣ, ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್​ ಬಿಷ್ಣೋಯ್​​ ಪ್ರಮುಖ ಆರೋಪಿಯಾಗಿರುವುದು. ಈತನಿಗೂ ಸಲ್ಮಾನ್​ ಖಾನ್​ಗೂ ಏನು ಸಂಬಂಧ ಎಂದರೆ ಈ ಹಿಂದೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್​​ ಅವರನ್ನು ಹತ್ಯೆ ಮಾಡಲು ಬಿಷ್ಣೋಯ್​ ಸಂಚು ರೂಪಿಸಿದ್ದ ಎನ್ನಲಾಗಿದೆ.
2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್​ ಜೈಲಿಗೆ ಹೋಗಿದ್ದರು. ಈ ಸಮಯದಲ್ಲಿ ಕೋರ್ಟ್ ಹೊರಗೆ ಮಾತನಾಡಿದ್ದ ಬಿಷ್ಣೋಯ್, ಸಲ್ಮಾನ್ ಖಾನ್​ನನ್ನು​ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿದ್ದ. ಬಿಷ್ಣೋಯ್​ ಅವರ ನಿಕಟ ಸಂಪರ್ಕದಲ್ಲಿದ್ದ ರಾಹುಲ್ ಅಲಿಯಾಸ್ ಸುನ್ನಿಯನ್ನ 2020ರಲ್ಲಿ ಬಂಧನ ಮಾಡಲಾಗಿತ್ತು. ಈ ವೇಳೆ, ವಿಚಾರಣೆ ನಡೆಸಿದಾಗ ಸಲ್ಮಾನ್ ಖಾನ್​​ ಹತ್ಯೆ ಮಾಡಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಸಲ ಸಲ್ಮಾನ್​ ಖಾನ್​ಗೆ ಬೆದರಿಕೆ ಸಹ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.
ನಟ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡಲಾಗುವುದು ಎಂದು ಆ ಪತ್ರದಲ್ಲಿ ಬರೆಯಲಾಗಿದೆ. ಈ ಬಗ್ಗೆ ಕುಟುಂಬಸ್ಥರು ಬಾಂದ್ರಾ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ನಿಜವಾಯ್ತು ಸಂದೇಹ: ಶೀಘ್ರದಲ್ಲೇ ನಿನ್ನ ಮರ್ಡರ್‌- ನಟ ಸಲ್ಮಾನ್‌ ಖಾನ್‌ ಟೇಬಲ್‌ ಮೇಲೆ ಬೆದರಿಕೆ ಪತ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
