ಮುಂಬೈ: ಶನಿವಾರ ಮುಂಬೈನ ಅಮಿತಾಬ್ ಬಚ್ಚನ್ ಅವರ ಜಲ್ಸಾ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಕೆಂಡ ಕಾರಿರುವ ಮಹಾರಾಷ್ಟ್ರ ಕಾಂಗ್ರೆಸ್ ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಅವರನ್ನು ಎಳೆ ತಂದಿತ್ತು. ಈ ಕುರಿತು ಆಕ್ರೋಶ ಹೊರಹಾಕಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ನಾನಾ ಪಾಟೋಳೆ ಅವರು, ಪೆಟ್ರೋಲ್ ಬೆಲೆ 100 ರೂಪಾಯಿ ದಾಟುತ್ತಿದ್ದರೂ ಯುಪಿಎ ಸರ್ಕಾರವಿದ್ದಾಗ ಆಕ್ರೋಶ ಹೊರ ಹಾಕಿದ್ದ ಅಮಿತಾಬ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಈಗ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದರು.
ಅಲ್ಲದೇ ಅಕ್ಷಯ್ ಹಾಗೂ ಅಮಿತಾಬ್ ಅವರ ಈ ಇಬ್ಬಗೆಯ ನೀತಿ ಖಂಡಿಸುತ್ತೇವೆ. ಮುಂಬರುವ ದಿನಗಳಲ್ಲಿ ಈ ಇಬ್ಬರೂ ನಟರ ಚಿತ್ರಗಳ ಶೂಟಿಂಗ್​ಗೆ ಮಹಾರಾಷ್ಟ್ರದಲ್ಲಿ ಅವಕಾಶ ನೀಡಲ್ಲ ಎಂದು ಪಾಟೋಲೆ ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ಮುಂಬೈನ ಅಮಿತಾಬ್ ಬಚ್ಚನ್ ಅವರ ನಿವಾಸಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಮನಮೋಹನ್ ಸಿಂಗ್ ಸರ್ಕಾರವಿದ್ದಾಗ 2012 ರಲ್ಲಿ ಪೆಟ್ರೋಲ್ ಬೆಲೆ ಹೆಚ್ಚಳದ ಬಗ್ಗೆ ಅಮಿತಾಬ್ ಬಚ್ಚನ್ ಹಾಗೂ ಅಕ್ಷಯಕುಮಾರ್ ಅವರು ಮಾಡಿದ್ದ ಟ್ವೀಟ್ ಹಂಚಿಕೊಂಡಿರುವ ನಾನಾ, 100 ರೂ ವರೆಗೆ ಪೆಟ್ರೋಲ್ ಮಾರಾಟವಾಗುತ್ತಿದದ್ರೂ ಈಗೇಕೆ ಇವರು ಬಾಯಿ ಮುಚ್ಚಿಕೊಂಡಿದ್ದಾರೆ. ಇವರ ಮೇಲೆ ಯಾರ ಒತ್ತಡ ಇದೆ ಎಂದು ಪ್ರಶ್ನಿಸಿದ್ದಾರೆ.
ಮನಮೋಹನ್ ಸಿಂಗ್ ಆಡಳಿತಾವಧಿಯಲ್ಲಿ ಕಚ್ಚಾ ತೈಲ ಬೆಲೆ ವಿಪರೀತ ಹೆಚ್ಚಳವಾಗಿತ್ತು. ಆದರು ಸಿಂಗ್ ಸರ್ಕಾರ ಪೆಟ್ರೋಲ್ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು. ಈಗ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿದಿದ್ದರೂ ಏಕೆ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಜನಸಾಮಾನ್ಯರ ಟಿಕೆಟ್ ದುಡ್ಡಿನಿಂದ ಬದುಕುವ ಈ ನಟರು ಏಕೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ನಾನಾ ಪ್ರಶ್ನಿಸಿದ್ದಾರೆ.
ಪೆಟ್ರೋಲ್ ಬೆಲೆ ಗಗನಕ್ಕೆ: ಅಮಿತಾಬ್, ಅಕ್ಷಯ್​ರನ್ನು ಎಳೆದು ತಂದ ಕಾಂಗ್ರೆಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 11 =
Remember me
