ನವದೆಹಲಿ:ಮುಂಗಾರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರದಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆ(IPC), ಸಿಆರ್​ಪಿಸಿ ಮತ್ತು ಎವಿಡೆನ್ಸ್​ ಆ್ಯಕ್ಟ್​ ಬದಲಿಗೆ ಹೊಸ ಕಾನೂನು ರೂಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದೆ.
ಈ ಹೊಸ ಮಸೂದೆಯ ಪ್ರಕಾರ ದೇಶದ್ರೋಹ ಅಪರಾಧವನ್ನು ರದ್ದುಗೊಳಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಶಿಕ್ಷೆಯಾಗಿ ಸಮುದಾಯ ಸೇವೆಯನ್ನು ಪರಿಚಯಿಸಲಾಗುತ್ತಿದೆ ಎಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ತಿಳಿಸಿದ್ದಾರೆ.
ಮಸೂದೆಯನ್ನು ಮಂಡಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಷಾ ನೂತನ ಮಸೂದೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಮಸೂದೆ(IPC), ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ(CRPC), ಭಾರತೀಯ ಸಾಕ್ಷ್ಯ ಕಾನೂನು(ಎವಿಡೆನ್ಸ್​ ಆ್ಯಕ್ಟ್) ಆಗಿ ಹೆಸರು ಬದಲಾಯಿಸಲಾಗಿದೆ.
#WATCH| Union Home Minister Amit Shah says, "…Under this law, we are repealing laws like Sedition…," as he speaks on Bharatiya Nyaya Sanhita Bill, 2023; The Bharatiya Sakshya Bill, 2023 and The Bharatiya Nagrik Suraksha Sanhita Bill in Lok Sabha.pic.twitter.com/CHlz0VOf7Z
ಇದನ್ನೂ ಓದಿ:ಕವಾಡಿಗರಹಟ್ಟಿ ವಿಷಜಲ ಪ್ರಕರಣ; ಚಿತ್ರದುರ್ಗಕ್ಕೆ ದಿಢೀರ್​ ಭೇಟಿ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ
ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅಪರಾಧ ಪ್ರಕರಣಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಸಮರ್ಪಕವಾಗಿ ಎದುರಿಸಲು ಹೊಸ ಶಿಕ್ಷೆಗಳನ್ನು ಮಸೂದೆಯಲ್ಲಿ ಸೇರಿಸಲಾಗಿದೆ. ಹೊಸ ನಿಯಮದ ಪ್ರಕಾರ ತನಿಖೆಯಲ್ಲಿ ತಂತ್ರಜ್ಞಾನ ಮತ್ತು ವಿಜ್ಞಾನದ ಬಳಕೆ, ಎಲೆಕ್ಟ್ರಾನಿಕ್​ ಡಿವೈಸ್​ ಮೂಲಕ ಸಮನ್ಸ್​ ಜಾರಿ ಮಾಡುವುದು, ಡಿಜಿಟಲ್​ ದಾಖಲೆಗಳನ್ನು ಸಾಕ್ಷ್ಯವನ್ನಾಗಿ ಪರಿಗಣಿಸುವ ಅವಕಾಶ ಇದೆ ಎಂದು ತಿಳಿಸಿದ್ದಾರೆ.
1860 ರಿಂದ 2023ರವರೆಗೆ ದೇಶದ ಕ್ರಿಮಿನಲ್​ ನ್ಯಾಯ ವ್ಯವಸ್ಥೆಯೂ ಬ್ರಿಟಿಷರು ರೂಪಿಸಿದ ಕಾನೂನಿನಂತೆ ಕಾರ್ಯನಿರ್ವಹಿಸುತ್ತಿತ್ತು. ಈ ಮೂರು ಹೊಸ ಕಾನೂನುಗಳಿಂದ ದೇಶದ ಕ್ರಿಮಿನಲ್​ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಯಾಗಲಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
