ಲಖನೌ:ಪ್ರಿಯಕರನಿಗಾಗಿ ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿರುವ ಪಾಕಿಸ್ತಾನದ ಪ್ರಜೆ ಸೀಮಾ ಹೈದರ್​ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ಆಚರಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸೀಮಾ ಹೈದರ್​ ಕೇಕ್​ ಕತ್ತರಿಸಿ ಪ್ರಧಾನಿ ಮೋದಿಗೆ ಶುಭ ಹಾರೈಸುತ್ತಿರುವುದು ಕಂಡು ಬರುತ್ತದೆ.
ಭಾರತಕ್ಕೆ ವಿಶ್ವದಾದ್ಯಂತ ಕೀರ್ತಿ ತಂದುಕೊಟ್ಟಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನುಮದಿನದ ಶುಭಾಶಯಗಳು ಎಂದು ಹೇಳಿರುವ ಸೀಮಾ ಹೈದರ್​, ವೈರಲ್​ ಆಗಿರುವ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿ ಶುಭ ಕೋರಿದ್ದಾರೆ.
Seema Haider, who came to India from Pakistan, celebrated PM Modi's birthday with her children.#NarendraModi#NarendraModiji#modijibirthday#modibirthday#PMModiBirthday#BirthdayWishespic.twitter.com/47Cz2e2STg
ಇದನ್ನೂ ಓದಿ:ಸನಾತನ ಧರ್ಮವನ್ನು ಗೌರವಿಸದಿದ್ದರೆ ಸಂವಿಧಾನವನ್ನು ಅವಮಾನಿಸಿದಂತೆ: ಕೇಂದ್ರ ಸಚಿವ ಅರ್ಜುನ್​ ಮೇಘವಾಲ್​
ಇತ್ತ ಸೀಮಾ ಹೈದರ್​ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಅವರ ನಡೆಯನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ಸೀಮಾ ಹೈದರ್​ ಪ್ರಧಾನಿ ಮೋದಿ ಅವರ ಜನ್ಮದಿನಾಚರಣೆ ಆಚರಿಸಿರಲಿಲ್ಲವೆಂದರೆ ಅದು ಅಪೂರ್ಣವಾಗುತ್ತಿತ್ತು ಎಂದು ವ್ಯಂಗ್ಯಭರಿತವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಹಿಂದೆ ದೇಶದ ಪ್ರಮುಖ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಸೇರಿದಂತೆ ಹಲವರಿಗೆ ರಕ್ಷಾ ಬಂಧನದ ಪ್ರಯುಕ್ತ ರಾಖಿ ಕಳುಹಿಸುವ ಮೂಲಕ ಸೀಮಾ ಹೈದರ್​ ಸುದ್ದಿಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + five =
Remember me
