ನವದೆಹಲಿ:ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್​ ಮಾದರಿಯಲ್ಲೇ ಉಜ್ಬೇಕಿಸ್ತಾನ ಮೂಲದ ಮಹಿಳೆಯೊಬ್ಬಳು ನೇಪಾಳದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದು, ಉತ್ತರ ಪ್ರದೇಶದ ಮಹಾರಾಜಗಂಜ್​ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಪಬ್​ಜಿ ಆಡುವಾಗ ಭಾರತೀಯ ಮೂಲದ ಸಚಿನ್​ ಮೀನ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿದ ಬಳಿಕ ಆತನನ್ನು ಭೇಟಿಯಾಗಲು ತನ್ನ ನಾಲ್ವರು ಮಕ್ಕಳೊಂದಿಗೆ ಪಾಕಿಸ್ತಾನದಿಂದ ನೇಪಾಳಕ್ಕೆ ಆಗಮಿಸಿ, ಅಲ್ಲಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಸೀಮಾ ಹೈದರ್ ಇಂದಿಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ ನೆಲೆಸಿದ್ದಾಳೆ. ಈ​ ಪ್ರಕರಣ ಇಡೀ ದೇಶದಲ್ಲಿ ಚರ್ಚೆಯಾಯಿತು ಮತ್ತು ಇಂದಿಗೂ ಚರ್ಚೆ ಆಗುತ್ತಲೇ ಇದೆ. ಈ ಪ್ರಕರಣ ಜೀವಂತವಾಗಿ ಇರುವಾಗಲೇ ಅದೇ ರೀತಿಯ ಮತ್ತೊಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
ಇದನ್ನೂ ಓದಿ:12ರ ಬಾಲಕಿ ಪ್ರೇಮ ನಿವೇದನೆಗೆ ಒಪ್ಪಿಲ್ಲ ಎಂದು ಇರಿದು ಹತ್ಯೆ ಮಾಡಿದ 20ರ ಯುವಕ!
ನೇಪಾಳದ ಸೋನೌಲಿ ಗಡಿಯಿಂದ ಉಜ್ಬೇಕಿಸ್ತಾನ ಮೂಲದ ಮಹಿಳೆಯೊಬ್ಬಳು ಅಕ್ರಮವಾಗಿ ಭಾರತವನ್ನು ಪ್ರವೇಶ ಮಾಡಿದ್ದು, ಆಕೆಯನ್ನು ಸಸಶ್ತ್ರ ಸೀಮಾ ಬಲ (ಎಸ್​ಎಸ್​ಬಿ) ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಗುರುತಿಗೆ ಆಧಾರ್​ ಕಾರ್ಡ್​ ತೋರಿಸಿದ್ದು, ಅನುಮಾನಗೊಂಡ ಪೊಲೀಸರು ಪರಿಶೀಲಿಸಿದಾಗ ಅದು ನಕಲಿ ಎಂದು ಗೊತ್ತಾಗಿ ಆಕೆಯನ್ನು ಬಂಧಿಸಲಾಗಿದೆ.
ಬಂಧಿತಳನ್ನು ದಿಲ್ಬರ್ ರಾಖಿಮೋವಾ ಎಂದು ಗುರುತಿಸಲಾಗಿದೆ. ವಿಚಾರಣೆಯಲ್ಲಿ ಮಹಿಳೆ ತಾನು ಉಜ್ಬೇಕಿಸ್ತಾನದಿಂದ ಬಂದಿರುವುದಾಗಿ ತಿಳಿಸಿದ್ದಾಳೆ. ಕೂಲಂಕುಷವಾಗಿ ತನಿಖೆ ನಡೆಸಿದಾಗ ಆಕೆಯ ಪಾಸ್‌ಪೋರ್ಟ್ ಮತ್ತು ವೀಸಾ ಮಾನ್ಯವಾಗಿದ್ದರೂ ಆಧಾರ್ ಕಾರ್ಡ್‌ನಲ್ಲಿರುವ ಮಾಹಿತಿ ಹೊಂದಿಕೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ. ಸೋನೌಲಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ. ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದು ಏಕೆ ಎಂಬುದು ತಿಳಿದುಬಂದಿಲ್ಲ. ಈ ಕುರಿತು ತನಿಖೆ ಮುಂದುವರಿದಿದೆ.(ಏಜೆನ್ಸೀಸ್​)
ಡೆತ್‍ನೋಟ್ ಬರೆದು ಸಾವಿಗೆ ಶರಣಾದ ಪೋಕ್ಸೋ ಆರೋಪಿ!

ಮಹಿಳಾ ಪೇದೆ ಸ್ನಾನ ಮಾಡುವುದನ್ನು ರಹಸ್ಯವಾಗಿ ವಿಡಿಯೋ ಮಾಡಿದ ಟ್ರೇನಿ ಕಾನ್‌ಸ್ಟೆಬಲ್; ಎಫ್‌ಐಆರ್ ದಾಖಲು

ರೈಲಿನಲ್ಲಿ ಗುಂಡಿನ ದಾಳಿ ಮಾಡಿ ಪ್ರಯಾಣಿಕರನ್ನು ಕೊಂದಿದ್ದ ರೈಲ್ವೆ ಪೊಲೀಸ್​ ಸೇವಯಿಂದಲೇ ವಜಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
