ಕಾಸರಗೋಡು:ವಿದೇಶದಲ್ಲಿ ಮನೆ ಕೆಲಸಕ್ಕಾಗಿ ಕಾಸರಗೋಡು ಜಿಲ್ಲೆಯ ಯುವತಿಯರನ್ನು ಕರೆದೊಯ್ದು, ಬಳಿಕ ಅವರನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್​ಗೆ ಹಸ್ತಾಂತರಿಸುತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ)ಕ್ಕೆ ಮಾಹಿತಿ ಲಭಿಸಿದ್ದು, ತನಿಖೆ ಆರಂಭಿಸಿದೆ.
ಗಲ್ಪ್ ರಾಷ್ಟ್ರ ಕೇಂದ್ರೀಕರಿಸಿ ಯುವತಿಯರನ್ನು ಮನೆಕೆಲಸಗಳಿಗೆ ರವಾನಿಸಲು ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಎನ್​ಐಎಗೆ ಮಾಹಿತಿ ಲಭಿಸಿದ್ದು, ಈತನ ಪತ್ತೆಗೆ ಬಲೆ ಬೀಸಿದೆ. ಎರ್ನಾಕುಳಂನ ನೇಮಕಾತಿ ಸಂಸ್ಥೆಯೊಂದು ಮಾವೇಲಿಕ್ಕರ ನಿವಾಸಿ ಯುವತಿಯನ್ನು ಕುವೈತ್​ಗೆ ಕಳುಹಿಸಿದ್ದು, ಅಲ್ಲಿಂದ ಆಕೆಯನ್ನು ಸಿರಿಯಾಕ್ಕೆ ರವಾನಿಸಿದೆ. ತಂಡದ ವಶದಲ್ಲಿದ್ದ ಈ ಯುವತಿ ತಪ್ಪಿಸಿಕೊಂಡು ಊರಿಗೆ ಬಂದಿದ್ದು, ತನಿಖಾ ತಂಡಕ್ಕೆ ಮಾಹಿತಿ ನೀಡಿದ್ದಾಳೆ.
ವಿದೇಶದಲ್ಲಿ ಮನೆಕೆಲಸಕ್ಕೆ ಯುವತಿಯರು ಬೇಕಾಗಿದ್ದು, 50 ಸಾವಿರ ರೂ.ವರೆಗೆ ವೇತನ ನೀಡುವುದಾಗಿ ಜಾಹೀರಾತು ನೀಡುತ್ತಾರೆ. ಗಲ್ಪ್ ರಾಷ್ಟ್ರಕ್ಕೆ ಯುವತಿಯರು ತಲುಪುತ್ತಿದ್ದಂತೆ ಅವರನ್ನು 10 ಲಕ್ಷ ರೂ.ಗೂ ಹೆಚ್ಚಿನ ಮೊತ್ತಕ್ಕೆ ಸಿರಿಯಾದ ಐಸಿಸ್ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಯುವತಿ ತಿಳಿಸಿದ್ದಾಳೆ. ಯುವತಿ ನೀಡಿದ ಮಾಹಿತಿ ಅನ್ವಯ ದೂರು ದಾಖಲಾಗಿದ್ದರೂ ಪ್ರಕರಣವನ್ನು ಎನ್​ಐಎಗೆ ವಹಿಸದಿರುವುದರಿಂದ ತನಿಖೆ ವಿಳಂಬವಾಗುತ್ತಿದೆ. ಈ ಕೃತ್ಯದಲ್ಲಿ ತಳಿಪರಂಬ ನಿವಾಸಿ ಮಜೀದ್ ಎಂಬಾತನ ಕೈವಾಡವಿರುವ ಬಗ್ಗೆ ಗುಮಾನಿ ವ್ಯಕ್ತವಾಗಿದ್ದು, ಆತನ ಪತ್ತೆಗೆ ತನಿಖಾ ಏಜೆನ್ಸಿ ಕ್ರಮ ಕೈಗೊಂಡಿದೆೆ.
ಕ್ರಿಕೆಟ್ ಪ್ರಿಯರಿಗೆ ಬಂಪರ್ ಆಫರ್​ ನೀಡಿದ ‘ನಮ್ಮ ಮೆಟ್ರೋ’; ಆದ್ರೆ ಈ ನಿಯಮ ಕಡ್ಡಾಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 11 =
Remember me
