ಗುವಾಹಟಿ:ಅಪ್ರಾಪ್ತ ಮನೆಯ ಕೆಲಸದಾಕೆಯನ್ನು ನಿರಂತರವಾಗಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಅಸ್ಸಾಂನ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಭಾನುವಾರ ಬಂಧಿಸಲಾಗಿದೆ.
ಇದನ್ನೂ ಓದಿ:ಬಾಯ್‌ಫ್ರೆಂಡ್‌ಗಿಂತ ಶ್ರೀಮಂತೆ ಸ್ಮೃತಿ ಮಂದಾನ: ಇವ್ರಿಗೆ ‘ಬಾಯ್ ಫ್ರೆಂಡ್’ ಇದಾನಾ ಎಂದ್ರು ಆರ್‌ಸಿಬಿ ಫ್ಯಾನ್ಸ್!
ಗೋಲಘಾಟ್ ಜಿಲ್ಲೆಯ ಲಚಿತ್ ಬೊರ್ಫುಕನ್ ಪೊಲೀಸ್ ಅಕಾಡೆಮಿಯಲ್ಲಿ (ಎಲ್‌ಬಿಪಿಎ) ನಿಯೋಜಿಸಲಾಗಿದ್ದ ಪೊಲೀಸರು ಉಪ ವರಿಷ್ಠಾಧಿಕಾರಿ(ಡಿಎಸ್‌ಪಿ) ಕಿರಣ್ ನಾಥ್ ಅವರನ್ನು ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾನುವಾರ ಸಂಜೆ ವಶಕ್ಕೆ ತೆಗೆದುಕೊಳ್ಳಲಾಗಿದೆ.
15 ವರ್ಷದ ಬಾಲಕಿ ಹಿರಿಯ ಪೊಲೀಸ್ ಅಧಿಕಾರಿಯಿಂದ ನಿರಂತವಾಗಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪಿ ತನ್ನ ನಿವಾಸದಲ್ಲಿ ಬಲವಂತವಾಗಿ ಬಂಧಿಸಿ ತನ್ನ ಕುಟುಂಬ ಸದಸ್ಯರ ಸಹಾಯದಿಂದ ಚಿತ್ರಹಿಂಸೆ ನೀಡುತ್ತಿದ್ದ ಎಂದು ಆರೋಪ ಮಾಡಿದ್ದಾರೆ.
ಬಾಲಕಿಯ ಕುಟುಂಬಸ್ಥರು ಶನಿವಾರ ದೇರ್ಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾನುವಾರ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಅಸ್ಸಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜ್ಞಾನೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, ತನಿಖೆಯ ವೇಳೆ ದೊರೆತಿರುವ ಸಾಕ್ಷ್ಯದ ಆಧಾರದ ಮೇಲೆ ಉಪ ಪೊಲೀಸ್​ ವರಿಷ್ಠಾಧಿಕಾರಿಯನ್ನು ಭಾನುವಾರ ಬಂಧಿಸಲಾಗಿದೆ.
ಆರೋಪಿ ಪೊಲೀಸ್​ ಅಧಿಕಾರಿ ವಿರುದ್ಧ ಐಪಿಸಿ ಸೆಕ್ಷನ್ 376, 506 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ), 2012 ರ ಸೆಕ್ಷನ್ 6 ರ ಅಡಿಯಲ್ಲಿ ಬಂಧಿಸಲಾಗಿದೆ. ಸಂತ್ರಸ್ತೆ ಬಾಲಕಿ ಮತ್ತು ಇತರ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nineteen − ten =
Remember me
