ನವದೆಹಲಿ:ಸಿಎಎ ವಿರುದ್ಧದ ಹೋರಾಟ ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತಾರಕಕ್ಕೇರಿದ್ದು ಒಬ್ಬ ಪೊಲೀಸ್​ ಪೇದೆ ಸೇರಿದಂತೆ ಒಟ್ಟು ಏಳು ಜನರು ಮೃತರಾಗಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿ ಆಸ್ಪತ್ರೆ ಸೇರಿದ್ದಾರೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ಮುಖಂಡ ಪಿ.ಚಿದಂಬರಂ ಹೋರಾಟಗಾರರ ಬಗ್ಗೆ ತೀವ್ರ ಕಳಕಳಿ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆದಿರುವ ಹಿಂಸಾಚಾರದ ಕುರಿತಾಗಿ ಮಾತನಾಡಿರುವ ಅವರು, “ನಿನ್ನೆ ನಡೆದಿರುವ ಘಟನೆ ಅಘಾತಕಾರಿ ಮತ್ತು ಖಂಡನೀಯ. ನೀವು ಸೂಕ್ಷ್ಮತೆ ಇರದ ನಾಯಕರಿಗೆ ಮತ ನೀಡಿ ಗೆಲ್ಲಿಸಿದ್ದೀರಿ, ಇದೀಗ ಅದಕ್ಕೆ ತಕ್ಕ ಬೆಲೆ ತೆರುತ್ತಿದ್ದೀರಿ” ಎಂದು ಹೇಳಿದ್ದಾರೆ.
ಭಾರತದಲ್ಲಿ 1955ರಿಂದಲೂ ಪೌರತ್ವ ಕಾಯ್ದೆ ಜಾರಿಯಲ್ಲಿದೆ. ಆದರೆ ಈಗ ಅದರಲ್ಲಿ ತಿದ್ದುಪಡಿಯ ಅವಶ್ಯಕತೆ ಇರಲಿಲ್ಲ. ಈಗ ಏನೂ ತುಂಬಾ ತಡವಾಗಿಲ್ಲ. ಸರ್ಕಾರ ಹೋರಾಟಗಾರರ ಬೇಡಿಕೆಗೆ ಬೆಲೆ ಕೊಡಬೇಕು. ಸುಪ್ರೀಂ ಕೋರ್ಟ್​ ಸಿಎಎ ತಿದ್ದುಪಡಿಗೆ ಸಿಂಧುತ್ವ ನೀಡುವವರೆಗೂ ಅದನ್ನು ಜಾರಿಗೆ ತರಲಾಗುವುದಿಲ್ಲ ಎಂದು ಘೋಷಿಸಬೇಕು ಎಂದು ಟ್ವಿಟ್ಟರ್​ನಲ್ಲಿ ಅವರು ಹೇಳಿದ್ದಾರೆ.
ಸರ್ಕಾರದ ಸಿಎಎ ಜಾರಿ ಮಾಡಿರುವುದು ಸಮಾಜವನ್ನು ವಿಭಜನೆ ಮಾಡುತ್ತಿದ್ದು ಅದನ್ನು ಕೂಡಲೇ ಕೈ ಬಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 9 =
Remember me
