ನವದೆಹಲಿ:ಐಎಎಸ್ ಅಧಿಕಾರಿ ಟಿವಿ ಸೋಮನಾಥನ್ ಅವರನ್ನು ಸಂಪುಟ ಕಾರ್ಯದರ್ಶಿಯಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೇಮಿಸಿದೆ.
ಇದನ್ನೂ ಓದಿ:ಬಿಜೆಪಿ- ಜೆಡಿಎಸ್​ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
ಮುಂದಿನ ಎರಡು ವರ್ಷಗಳ ಅವಧಿಗೆ ಸಂಪುಟ ಕಾರ್ಯದರ್ಶಿಯಾಗಿ ನೇಮಕ ಮಾಡಲು. ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ರಾಜೀವ್ ಗೌಬಾ ಅವರಿಗೆ ಸಂಪುಟ ಕಾರ್ಯದರ್ಶಿಯಾಗಿ ಎರಡನೇ ಬಾರಿ ವಿಸ್ತರಣೆ ಮಾಡಲಾಗಿಲ್ಲ.
ಸೋಮನಾಥನ್ ಅವರು ತಮಿಳುನಾಡು ಕೇಡರ್‌ನ 1987-ಬ್ಯಾಚ್ ಐಎಎಸ್ ಅಧಿಕಾರಿ. 2021ರಿಂದ ಸೋಮನಾಥನ್ ಅವರು ಕೇಂದ್ರ ಹಣಕಾಸು ಕಾರ್ಯದರ್ಶಿ ಮತ್ತು ವೆಚ್ಚದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಚಿವಾಲಯದ ಎಲ್ಲಾ ಕಾರ್ಯದರ್ಶಿಗಳಲ್ಲಿ ಅವರು ಅತ್ಯಂತ ಹಿರಿಯರಾಗಿದ್ದರು.
ಸೋಮನಾಥನ್ ಅವರು ಆಡಳಿತಾತ್ಮಕ ಸೇವೆಗಳಲ್ಲಿ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಣಕಾಸು ಸಚಿವಾಲಯಕ್ಕೆ ಸೇರುವ ಮೊದಲು ಅವರು ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡಿದ್ದರು. ಇದಲ್ಲದೇ ಬಜೆಟ್ ಮೇಕಿಂಗ್ ತಂಡದಲ್ಲೂ ಅವರಿದ್ದರು ಎನ್ನಲಾಗಿದೆ.
ರಾಜೀವ್ ಗೌಬಾ ಅವರು ಐದು ವರ್ಷಗಳ ಹಿಂದೆ ಆಗಸ್ಟ್ 30, 2019 ರಂದು ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಕುಮಾರಸ್ವಾಮಿ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಉತ್ತಮ- ಡಿಕೆ ಶಿವಕುಮಾರ್; ಯಾಕೆ ಈ ರೀತಿ ಹೇಳಿದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 7 =
Remember me
