ಚೆನ್ನೈ:ಹಿರಿಯ ಐಪಿಎಸ್​ ಅಧಿಕಾರಿಯೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸಿ. ವಿಜಯ್​ಕುಮಾರ್​(45) ಎಂದು ಗುರುತಿಸಲಾಗಿದ್ದು, ಇವರು ಕೊಯಮತ್ತೂರು ಜಿಲ್ಲೆಯ ಡೆಪ್ಯೂಟಿ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 6:45ರ ಸುಮಾರಿಗೆ ವಾಯು ವಿಹಾರ ಮುಗಿಸಿಕೊಂಡು ವಾಪಸ್​ ಬಂದ ನಂತರ ಸರ್ವೀಸ್​ ರಿವಾಲ್ವರ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2009ರ ಬ್ಯಾಚ್​ನ ತಮಿಳುನಾಡು ಕೇಡರ್​ನ ಐಪಿಎಸ್​ ಅಧಿಕಾರಿಯಾಗಿದ್ದ ವಿಜಯ್​ಕುಮಾರ್​ ಅವರು ಕಳೆದ ಕೆಲ ತಿಂಗಳುಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ನಿದ್ರಾಹೀನತೆಯಿಂದ ಸಹ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಇದನ್ನೂ ಓದಿ:ಲಿಂಗಾಯತರ ಶೈಕ್ಷಣಿಕ ಕ್ರಾಂತಿಗೆ ಮಹಾಸಭಾ ಕಾರಣ: ಎಂ.ಬಿ. ಪಾಟೀಲ್
ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಡಿಜಿಪಿ ಶಂಕರ್​ ಜೈವಾಲ್​ ವಿಜಯ್​ಕುಮಾರ್​ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ನಿದ್ರಾಹೀನತೆಯಿಮದ ಬಳುತ್ತಿದ್ದ ಅವರು ಮಾತ್ರೆಗಳನ್ನು ಸೇವಿಸುತ್ತಿದ್ದರು ಎಂದು ಹೇಳಲಾಗಿದೆ.
ಅವರ ಆತ್ಮಹತ್ಯೆಗೆ ಕೆಲಸದ ಒತ್ತಡವೂ ಸಹ ಪ್ರಮುಖ ಕಾರಣ ಎಂದು ಹೇಳಲಾಗಿದ್ದು, ಈ ಬಗ್ಗೆ ತನಿಖಾ ವರದಿ ಕೈ ಸೇರಿದ ನಂತರ ಮತ್ತಷ್ಟು ಮಾಹಿತಯನ್ನು ಹಂಚಿಕೊಳ್ಳಲಾಗುವುದು ಎಂದು ತಮಿಳುನಾಡು ಡಿಜಿಪಿ ಶಂಕರ್ ಜೈವಾಲ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
