ನಾಗ್ಪುರ:ಇಲ್ಲಿನ ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಅವರ ಪತ್ನಿ ಅಸಹಜ ಲೈಂಗಿಕಕ್ರಿಯೆಗೆ ಆಗ್ರಹಿಸುತ್ತಿದ್ದ ಆರೋಪ ಮಾಡಿದ್ದಾರೆ. ಇದೀಗ ನ್ಯಾಯಾಧೀಶರಿಂದ ಪ್ರತ್ಯೇಕಗೊಂಡಿರುವ ಅವರ ಪತ್ನಿ ಈ ದೂರು ದಾಖಲಿಸಿದ್ದು, ತಮಗೆ ನ್ಯಾಯಾಧೀಶರ ಕುಟುಂಬದವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದನ್ನು ಆಧರಿಸಿ ಅಮ್ರಾವತಿಯ ವರೌಡ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ಕೂಡ ದಾಖಲಾಗಿದೆ. ಇದೀಗ ಈ ಎಫ್​ಐಆರ್​ ಅನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಧೀಶರು ಬಾಂಬೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಪತ್ನಿ ಜಲಗಾಂವ್​ನ ಮುಕ್ತಾಯಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಠಾಣಾ ವ್ಯಾಪ್ತಿಯ ಅವಶ್ಯಕತೆ ಇದೆ ಎಂಬ ಕಾರಣಕ್ಕೆ ಪ್ರಕರಣವನ್ನು ವರೌಡ್​ ಪೊಲೀಸ್​ ಠಾಣೆಗೆ ವರ್ಗಾಯಿಸಲಾಗಿತ್ತು. ಆ ಠಾಣೆಯಲ್ಲಿ ಈಗ ನ್ಯಾಯಾಧೀಶರು ಮತ್ತು ಅವರ ಕುಟುಂಬ ವರ್ಗದವರ ವಿರುದ್ಧ ವರದಕ್ಷಿಣೆ ಕಿರುಕುಳ (498ಎ), ಅಸಹಜ ಲೈಂಗಿಕಕ್ರಿಯೆ (377) ಸೇರಿ ಐಪಿಸಿ ವಿವಿಧ ದಂಡಸಂಹಿತೆಗಳ ಮೇರೆಗೆ ಎಫ್​ಐಆರ್​ ದಾಖಲಾಗಿದೆ.
ತಮ್ಮನ್ನು ಅಸಹಜ ಲೈಂಗಿಕಕ್ರಿಯೆಗೆ ಸಹಕರಿಸುವಂತೆ ನ್ಯಾಯಾಧೀಶರು ಒತ್ತಾಯಿಸುತ್ತಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ನನಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದರು. ಅಲ್ಲದೆ ನನ್ನ ನಗ್ನ ಚಿತ್ರಗಳನ್ನು ಮೊಬೈಲ್​ನಲ್ಲಿ ಸೆರೆಹಿಡಿದುಕೊಂಡು ಹೆಚ್ಚಿನ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ನ್ಯಾಯಾಧೀಶರ ಪತ್ನಿ ತಾವು ಕೊಟ್ಟಿರುವ ದೂರಿನಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ:ಆರಂಭವಾಗಿದೆ ಕರೊನಾದ ಅಂತ್ಯಕಾಲ; ದೆಹಲಿ ಮುಂಚೂಣಿಯಲ್ಲಿ; ಏನಿದು ಆರ್​-ವ್ಯಾಲ್ಯೂ ಲೆಕ್ಕಾಚಾರ…?
ಸೆಷನ್ಸ್​ ನ್ಯಾಯಾಲಯದಿಂದ ಕುಟುಂಬದವರು ನಿರೀಕ್ಷಣಾ ಜಾಮೀನು ಪಡೆದುಕೊಂಡ ನಂತರದಲ್ಲಿ ಪ್ರತಿವಾರವೂ ಪೊಲೀಸ್​ ಠಾಣೆಗೆ ಹಾಜರಾತಿ ನೀಡಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಇದರ ಬೆನ್ನಲ್ಲೇ ತಮ್ಮ ವಕೀಲ ಪರ್ವೇಜ್​ ಮಿಶ್ರಾ ಅವರ ಮೂಲಕ ಸೆಷನ್ಸ್​ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ನ್ಯಾಯಾಧೀಶರ ಪತ್ನಿ ದೂರು ನೀಡಿ 13 ತಿಂಗಳ ಬಳಿಕ ಎಫ್​ಐಆರ್​ ದಾಖಲಿಸಲಾಗಿದೆ. ಇದರಿಂದಾಗಿ ಅವರ ವಿರುದ್ಧ ಅವರ ಪತ್ನಿ ಮಾಡುತ್ತಿರುವ ಆರೋಪಗಳ ಬಗ್ಗೆ ಸಾಕಷ್ಟು ಅನುಮಾನ ಮೂಡುತ್ತದೆ. ಕಳೆದ ವರ್ಷ ಇಬ್ಬರೂ ಒಪ್ಪಿಕೊಂಡು ವಿವಾಹವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿರುವ ವಿಷಯವನ್ನು ಎಫ್​ಐಆರ್​ನಲ್ಲಿ ಪ್ರಸ್ತಾಪಸಿಲಾಗಿಲ್ಲ ಎಂದು ಬಾಂಬೆ ಹೈಕೋರ್ಟ್​ಗೆ ತಾವು ಸಲ್ಲಿಸಿರುವ ಮೇಲ್ಮನವಿಯಲ್ಲಿ ಪ್ರತಿಪಾದಿಸಿದ್ದಾರೆ.
ರಾಮಮಂದಿರ ಭೂಮಿ ಪೂಜೆಗಾಗಿ 151 ಪವಿತ್ರ ನದಿಗಳ ನೀರು ಸಂಗ್ರಹಿಸಿ, ಅಯೋಧ್ಯೆ ತಲುಪಿದ ಸಹೋದರರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
