ತಿರುವನಂತಪುರಂ:ಕೇರಳ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮತದಾನಕ್ಕೂ ಮುನ್ನವೇ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಕೇರಳ ವಿಧಾನಸಭಾ ಕ್ಷೇತ್ರಗಳಲ್ಲಿ ಸಲ್ಲಿಕೆಯಾಗಿದ್ದು, ಎನ್​ಡಿಎ ಅಭ್ಯರ್ಥಿಗಳ ನಾಮಪತ್ರ ಚುನಾವಣಾ ಅಧಿಕಾರಿಗಳಿಂದ ತಿರಸ್ಕೃತಗೊಂಡಿದೆ.
ಥಲಸ್ಸೆರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಮತ್ತು ಕಣ್ಣೂರಿನ ಪಕ್ಷದ ಅಧ್ಯಕ್ಷ ಎನ್​ ಹರಿದಾಸ್​ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಹಿಯನ್ನು ಹೊಂದಿಲ್ಲ ಎಂಬ ಕಾರಣ ನೀಡಲಾಗಿದೆ.
ಗುರುವಾಯೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮಹಿಳಾ ಮೊರ್ಚಾದ ರಾಜ್ಯಾಧ್ಯಕ್ಷೆ ನಿವೇದಿತಾ ಸುಬ್ರಮಣಿಯಂ ನಾಮಪತ್ರವೂ ಸಹ ಈ ಮೇಲಿನ ಕಾರಣ ನೀಡಿಯೇ ತಿರಸ್ಕರಿಸಲಾಗಿದೆ.
ಇದನ್ನೂ ಓದಿರಿ:ಪ್ರೀತಿಸಿ ಮದ್ವೆಯಾಗುವುದೇ ಈಕೆಯ ಕೆಲ್ಸ: 18 ಯುವಕರನ್ನು ವರಿಸಿದ ಸುಂದರಿಯ ಕತೆ ಕೇಳಿದ್ರೆ ದಂಗಾಗ್ತೀರಾ!
ಇದನ್ನು ಹೊರತುಪಡಿಸಿದರೆ, ಇಡುಕ್ಕಿಯ ದೇವಿಕುಲಂ ಕ್ಷೇತ್ರದಲ್ಲಿ ಎಐಎಡಿಎಂಕೆ ಅಭ್ಯರ್ಥಿ ಧನಲಕ್ಷ್ಮಿ ನಾಮಪತ್ರವನ್ನು ಅಪೂರ್ಣ ಎಂಬ ಕಾರಣ ನೀಡಿ ತಿರಸ್ಕರಿಸಲಾಗಿದೆ. ಇಲ್ಲಿ ಎಐಎಡಿಎಂಕೆ ಅಭ್ಯರ್ಥಿಗೆ ಬಿಜೆಪಿ ಬೆಂಬಲ ನೀಡಿತ್ತು.
ಏಪ್ರಿಲ್​ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಸಲಾಗಿದ್ದ ನಾಮಪತ್ರಗಳನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸದ ಕ್ರಮವನ್ನು ಪ್ರಶ್ನಿಸಿ ಭಾನುವಾರ ಕೇರಳ ಹೈಕೋರ್ಟ್​ ಮೆಟ್ಟಿಲೇರಿರುವ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಆಯೋಗದ ಪ್ರತಿಕ್ರಿಯೆಯನ್ನು ಕೇಳಿದೆ.
ನ್ಯಾಯಮೂರ್ತಿ ಎನ್.ನಾಗರೇಶ್ ಅವರು ಸೋಮವಾರ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದು, ಹೆಚ್ಚಿನ ವಿಚಾರಣೆಗೆ ಅರ್ಜಿಗಳನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.(ಏಜೆನ್ಸೀಸ್​)
ಕಿಸ್​ ಕೇಳಿದ ಅಭಿಮಾನಿಗೆ ಜಾಹ್ನವಿ ಕಪೂರ್​ ಕೊಟ್ಟ ಖಡಕ್​ ಉತ್ತರ ಹೀಗಿದೆ..!

ಶಾಕಿಂಗ್​ ನ್ಯೂಸ್​| ಕೂಲ್​ ಡ್ರಿಂಕ್ಸ್​ ಬಾಟಲ್​ ಒಳಗೆ ಹಾವಿನ ಮರಿ ಕಂಡು ಕಂಗಾಲಾದ ಗ್ರಾಹಕ..!

ಮಾಲ್​ನಲ್ಲಿ ಬಟ್ಟೆ ಖರೀದಿಸಿ ಟ್ರಯಲ್​ ರೂಮ್​ಗೆ ಹೋಗಿ ಬರುವಷ್ಟರಲ್ಲಿ ಮಹಿಳೆಗೆ ಕಾದಿತ್ತು ಬಿಗ್​ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
