ಗುಜರಾತ್​:ಗುಜರಾತ್‌ನ ಪಟಾನ್ ಜಿಲ್ಲೆಯ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಏಳು ರೋಗಿಗಳು ತಮ್ಮ ದೃಷ್ಟಿಯನ್ನು ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದು, ಸೋಂಕಿನಿಂದಾಗಿ ರೋಗಿಗಳಿಗೆ ಈ ರೀತಿಯ ತೊಂದರೆಗಳು ಉಂಟಾಗಿವೆ ಎಂದು ಆಸ್ಪತ್ರೆ ತಿಳಿಸಿದೆ.
ಇದನ್ನೂ ಓದಿ:ರೂ. 2 ಲಕ್ಷ ಹೂಡಿಕೆಯಾಯ್ತು 1 ಕೋಟಿ: 5200% ಲಾಭ ನೀಡಿದ ಮಲ್ಟಿಬ್ಯಾಗರ್​ ಷೇರಿಗೆ ಈಗಲೂ ಬೇಡಿಕೆ
ಫೆಬ್ರವರಿ 2ರಂದು ರಾಧನ್‌ಪುರ ಪಟ್ಟಣದ ಸರ್ವೋದಯ ಕಣ್ಣಿನ ಆಸ್ಪತ್ರೆಯಲ್ಲಿ ಒಟ್ಟು 13 ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯ ಟ್ರಸ್ಟಿ ಭಾರತಿ ವಖಾರಿಯಾ, ಏಳು ರೋಗಿಗಳಲ್ಲಿ ಐವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಎಂ ಮತ್ತು ಜೆ ಇನ್ಸ್ಟಿಟ್ಯೂಟ್ ಆಫ್ ನೇತ್ರಶಾಸ್ತ್ರಕ್ಕೆ ಮತ್ತು ಇಬ್ಬರನ್ನು ಮೆಹ್ಸಾನಾ ಜಿಲ್ಲೆಯ ವಿಸ್ನಗರ ಪಟ್ಟಣದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಎಂದು ಹೇಳಿದ್ದಾರೆ.
ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಋಷಿಕೇಶ್ ಪಟೇಲ್, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನಿಖೆ ನಡೆಸಲು ಸಮಿತಿಯನ್ನು ರಚಿಸಿದೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸುದ್ದಿಗಾರರಿಗೆ ತಿಳಿಸಿದರು. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ ಎಂದು ವರದಿಯಾಗಿದೆ,(ಏಜೆನ್ಸೀಸ್).
ಬಹುನಿರೀಕ್ಷಿತ ‘ದೇವರ’ ಸಿನಿಮಾಗೆ ಖ್ಯಾತ ನಟಿಯ ಎಂಟ್ರಿ! ಅತಿಥಿ ಪಾತ್ರವೋ? ನಾಯಕಿಯೋ? ಇಲ್ಲಿದೆ ಅಸಲಿ ಸಂಗತಿ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen − one =
Remember me
