ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ.
ದೇಶದ ಮುತ್ಸದ್ಧಿಯ ನಿಧನಕ್ಕೆ ದೇಶಾದ್ಯಂತ ಏಳು ದಿನಗಳವರೆಗೆ ಶೋಕಾಚರಣೆ ಮಾಡಲಾಗುತ್ತದೆ. ಆಗಸ್ಟ್​ 31ರಿಂದ ಸೆಪ್ಟಂಬರ್​ 6ರ ವರೆಗೆ (ಎರಡೂ ದಿನಗಳು ಸೇರಿ) ಈ ಶೋಕಾಚರಣೆ ಜಾರಿಯಲ್ಲಿರಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಈ ನಿಮಿತ್ತ ದೇಶದೆಲ್ಲೆಡೆ ಸರ್ಕಾರಿ ಕಚೇರಿ, ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಈ ಅವಧಿಯಲ್ಲಿ ಸಾರ್ವಜನಿಕ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯದಲ್ಲೂ ಕೂಡ ಇದೇ ನಿಯಮ ಪಾಲನೆಯಾಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್​ ಮೊಮಿನ್​ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಲಿಟಲ್​ ಮಾಸ್ಟರ್​ ಆಗಿದ್ದರು ಪ್ರಣಬ್​ ದಾ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
