ಅಹಮದಾಬಾದ್:ಭಾರೀ ಮಳೆಯಿಂದಾಗಿ ಗುಜರಾತ್​ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸೋಮವಾರ ಒಂದೇ ದಿನ 7 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಅಹಮದಾಬಾದ್​, ಗಾಂಧಿನಗರ ಸೇರಿದಂತೆ ಬಹುತೇಕ ನಗರಗಳು ನೀರಿನಿಂದ ಜಲಾವೃತಗೊಂಡಿದ್ದು, ಇನ್ನೂ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 1 ರಿಂದ ಸುರಿದ ಭಾರೀ ಮಳೆಯಿಂದಾದ ಅನಾಹುತದಿಂದ ಈವರೆಗೆ 63ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಚಿವ ರಾಜೇಂದ್ರ ತ್ರಿವೇದಿ ತಿಳಿಸಿದ್ದಾರೆ.ನೀರಿನಿಂದ ಆವೃತವಾಗಿರುವ ಪ್ರದೇಶದಿಂದ 9000 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಅಹಮದಾಬಾದ್​ ನಗರದಲ್ಲೇ ಬರೋಬ್ಬರಿ 219 ಮಿಮೀ ದಾಖಲೆಯ ಮಳೆಯಾಗಿದೆ. ಸದ್ಯ ಪ್ರವಾಹ ಪರಿಸ್ಥಿತಿ ಎದುರಾಗಿರುವುದರಿಂದ ಬಹುತೇಕ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರದಿಂದಲೇ ರಜೆ ಘೋಷಿಸಲಾಗಿದೆ.
Gujarat | Heavy rainfall results in severe water logging and flood-like situation in Ahmedabad (11.07)pic.twitter.com/hzENXGv0Zl
— ANI (@ANI)July 11, 2022

ದಕ್ಷಿಣ ಗುಜರಾತ್​ನ ದಂಗ್​, ನವಸರಿ, ತಪಿ ಮತ್ತು ವಲ್ಸಾದ್​ ಜಿಲ್ಲೆಗಳಲ್ಲಿ ಪ್ರವಾಹ ಮತ್ತಷ್ಟು ಹೆಚ್ಚಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್​ ಶಾ ರಾಜ್ಯಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ನಡುವೆ ಎನ್​ಡಿಆರ್​ಎಫ್​ ತಂಡವನ್ನು ಕೇಂದ್ರ ಕಳುಹಿಸಿಕೊಟ್ಟಿದೆ.ಅಂಬಿಕಾ ನದಿಯಲ್ಲಿ ಸಿಲುಕಿಕೊಂಡಿದ್ದ 16 ಮಂದಿಯನ್ನು ಏರ್​ಲಿಫ್ಟ್ ಮಾಡಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ.(ಏಜೆನ್ಸೀಸ್​)
ಶ್ರೀಲಂಕಾ ಬಿಕ್ಕಟ್ಟು: ದುಬೈಗೆ ಪರಾರಿಯಾದ್ರಾ ಅಧ್ಯಕ್ಷ ಗೋತಬಯ ರಾಜಪಕ್ಸ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − four =
Remember me
