ಜಮ್ಮು ಮತ್ತು ಕಾಶ್ಮೀರ:ಪವರ್​​​ ಪ್ರಾಜೆಕ್ಟ್​​ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನವೊಂದು ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿಶ್ತ್ವಾರದಲ್ಲಿ ನಡೆದಿದೆ.
ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ದಂಗದೂರು ಅಣೆಕಟ್ಟಿನ ಬಳಿ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇದನ್ನೂ ಓದಿ: ಬೋರಾಯ್ತಾ ಬರೀ ಮಾತು?; ಜತೆಗಿರಬೇಕು ಶರೀರ ಶಾರೀರ
ಅಪಘಾತವನ್ನು ದೃಢೀಕರಿಸಿದ ಕಿಶ್ತ್ವಾರ್ ಪೊಲೀಸರು, ಕ್ರೂಸರ್ ವಾಹನವು ಕಣಿವೆಯಲ್ಲಿ ಬಿದ್ದಿದೆ, ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ. ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಸಾವು-ನೋವು ಸಂಭವಿಸಿದೆ.
‘ ಈ ಸ್ಥಳದಲ್ಲಿ ಹೆಚ್ಚಾಗಿ ಅಪಘಾತ ಸಂಭವಿಸುತ್ತದೆ. ಚಾಲಕ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್​​ ಅಧಿಕರಿಯೊಬ್ಬರು ತಿಳಿಸಿದ್ದಾರೆ.
Just now spoke to DC#KishtwarDr Devansh Yadav about unfortunate road accident at Dangduru Dam site. 7 persons dead, 1 critically injured. Injured being shifted to District Hospital Kishtwar or GMC#Dodaas per requirement. All possible help, as required, will be provided.
— Dr Jitendra Singh (@DrJitendraSingh)May 24, 2023

ಧರೆಗೆ ಉರುಳಿದ 200 ವರ್ಷದ ಹಳೆಯ ಮರ; ಇಬ್ಬರು ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
