ಉತ್ತರಪ್ರದೇಶ: ಐದು ವರ್ಷದ ಬಾಲಕಿಯ ಮೇಲೆ ಏಳು ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಪೋಷಕರು ಆತಂಕಗೊಳ್ಳುವಂಥ ಘಟನೆ ನಡೆದಿದ್ದು, ಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಗುವನ್ನು ಬಂಧಿಸಿದ್ದಾರೆ.
ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ, ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಜಿಲ್ಲಾ ಮಹಿಳಾ ಆಸ್ಪತ್ರೆ ಪ್ರಭಾರಿ ಡಾ.ವಂದನಾ ಸಿಂಗ್ ತಿಳಿಸಿದ್ದಾರೆ. ಇನ್ನು ಪ್ರಥಮ ಚಿಕಿತ್ಸೆ ನಂತರ ಕುಟುಂಬ ಸಮೇತ ಆಕೆಯನ್ನು ಮನೆಗೆ ಕಳುಹಿಸಲಾಗಿದೆ.
ಕಾನ್ಪುರ ದೇಹತ್‌ನ ಅಕ್ಬರ್‌ಪುರದ ಹಳ್ಳಿಯಲ್ಲಿ ವಾಸಿಸುತ್ತಿದ್ದ ಐದು ವರ್ಷದ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಇನ್ನು ಏಳು ವರ್ಷದ ಬಾಲಕ ಆಕೆಯ ನೆರೆಮನೆಯವನೇ ಆಗಿದ್ದಾನೆ. ಇದೇ ವೇಳೆ ಆರೋಪಿಯು ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಅಮಾಯಕ ಹುಡುಗಿಯ ಮೇಲೆ ಅತ್ಯಾಚಾರ ನಡೆದಿದೆ. ಬಳಿಕ ಬಾಲಕಿಯ ಖಾಸಗಿ ಭಾಗದಿಂದ ರಕ್ತ ಸೋರಲು ಆರಂಭವಾಗಿತ್ತು. ತಕ್ಷಣವೇ ಆಕೆ ಮನೆಗೆ ಓಡಿ ಬಂದಿದ್ದಾಳೆ. ಮನೆಗೆ ಬಂದು ತಾಯಿ ಎದುರು ಅಳುತ್ತಿದ್ದ ಆಕೆ, ಪಕ್ಕದ ಮನೆಯ ಹುಡುಗ ಈ ಕೆಲಸ ಮಾಡಿದ್ದಾನೆ ಎಂದು ಹೇಳಿದ್ದಳು. ಸಂತ್ರಸ್ತೆಯ ಮನೆಯವರು ಬಾಲಕಿಯನ್ನು ಠಾಣೆಗೆ ಕರೆದೊಯ್ದು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಪೊಲೀಸರು, ರೋಪಿ ಮಗು ಮತ್ತು ಸಂತ್ರಸ್ತೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಬಾಲಕನ ತಾಯಿ ಕೋಪಗೊಂಡು ಸಂತ್ರಸ್ತೆಯ ತಾಯಿಯೊಂದಿಗೆ ಜಗಳವಾಡಿದರು. ಇದು ವಿಷಯವನ್ನು ಮತ್ತಷ್ಟು ಉಲ್ಬಣಗೊಳಿಸಿತು ಎನ್ನಲಾಗಿದೆ.
ಸಂತ್ರಸ್ತ ಬಾಲಕಿಯ ತಂದೆಯ ದೂರಿನ ಮೇರೆಗೆ ಠಾಣಾ ಪ್ರಭಾರಿ ತಕ್ಷಣವೇ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಕೇಸ್‌ ದಾಖಲಿಸಿದ್ದಾರೆ.ಬಾಲಕನ ತಾಯಿ ಮಾತ್ರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಮಗುವಿಗೆ ತಿಳಿ ಹೇಳಿ ಬೈಯುವ ಬದಲು ನನ್ನೊಂದಿಗೆ ಜಗಳವಾಡಿದರು. ವಿಷಯ ಕೈಗೂಡದಿದ್ದಾಗ ವಿಷಯ ಅಕ್ಬರ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ಸತೀಶ್ ಸಿಂಗ್‌ಗೆ ತಲುಪಿದೆ.
ಪೊಲೀಸ್ ಠಾಣೆಯ ಉಸ್ತುವಾರಿ ಸತೀಶ್ ಸಿಂಗ್, ಏಳು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ಯಾವುದೇ ಅಪರಾಧ ಮಾಡಿದರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ. ಆದರೂ ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 16 =
Remember me
