ಹರಿಯಾಣ:ವಿಶ್ವ ಹಿಂದೂ ಪರಿಷತ್​ ರ್‍ಯಾಲಿ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಿ, ಗುಂಡು ಹಾರಿಸಿದ ಪರಿಣಾಮ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಮೇವಾತ್​ ಎಂಬ ಪ್ರದೇಶದಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಕೆಲವು ಕಿಡಿಗೇಡಿಗಳು ವಿಹಿಂಪ ರ್‍ಯಾಲಿ ಸಾಗುವ ವೇಳೆ ಕಲ್ಲು ತೂರಾಟ ನಡೆಸುತ್ತಿರುವುದು ಕಂಡು ಬಂದಿದೆ. ಇದಾದ ಕೆಲ ಹೊತ್ತಿನ ಬಳಿಕ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿದ್ದು, ಘರ್ಷಣೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
Some people pelted stones and fired at vehicles of Vishwa Hindu Parishad workers near Nalhar Mahadev Temple in Nuh,#Mewat.pic.twitter.com/9hi0Tr67aK
ಇದನ್ನೂ ಓದಿ:ಅಧಿವೇಶನ ಮುಗಿದರು ಬಿಜೆಪಿಯವರು ವಿಪಕ್ಷ ನಾಯಕನನ್ನು ನೇಮಿಸದಿರುವುದು ದುರಂತ: ಲಕ್ಷ್ಮಣ್​ ಸವದಿ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಹರಿಯಾಣದ ಮೇವಾತ್​ ಎಂಬ ಪ್ರದೇಶದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್​ ರ್‍ಯಾಲಿ ನಡೆಯುವ ವೇಳೆ ಕೆಲವು ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಿ, ಗುಂಡು ಹಾರಿಸುವ ಮೂಲಕ ಶಾಂತಿಗೆ ಭಂಗ ತರಲು ಯತ್ನಿಸಿದ್ದಾರೆ.
ಕಲ್ಲು ತೂರಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು ತಲೆಮಾರಿಸಿಕೊಂಡಿರುವ ಆರೋಪಿಗಳನ್ನು ಹುಡುಕಲು ತಂಡ ಒಂದನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಘಟನೆ ಕುರಿತು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
