ನವದೆಹಲಿ:ಯುವಕರು ವಾರಕ್ಕೆ 70 ಗಂಟೆಗಳ ಕೆಲಸ ಮಾಡಬೇಕು ಎಂದು ಸಾಫ್ಟ್​ವೇರ್ ಕಂಪನಿಯಾಗಿರುವ ಇನ್​​ಫೊಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು ನೀಡಿರುವ ಹೇಳಿಕೆ ಚರ್ಚೆಯಲ್ಲಿರುವಾಗಲೇ ಕೇಂದ್ರ ಆರೋಗ್ಯ ಸಚಿವರು ಅತಿಯಾಗಿ ಕೆಲಸ ಮಾಡಬೇಡಿ ಎಂದಿರುವ ಹೇಳಿಕೆಯೊಂದು ಕೇಳಿಬಂದಿದೆ.
ದೇಶಾದ್ಯಂತ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ ಅತಿಯಾಗಿ ಕೆಲಸ ಮಾಡಬಾರದು ಎಂಬ ಮುನ್ನೆಚ್ಚರಿಕೆಯ ಸಂದೇಶವೊಂದನ್ನು ಸಾರ್ವಜನಿಕರಿಗೆ ನೀಡಿದ್ದಾರೆ. ಐಸಿಎಂಆರ್​ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಅವರು ಈ ಮಾತನ್ನು ಹೇಳಿದ್ದಾರೆ.
ಇದನ್ನೂ ಓದಿ:ಸಾಫ್ಟ್​ವೇರ್​ ಉದ್ಯೋಗ: ಫ್ರೆಷರ್ಸ್​ಗೆ ಭಾರತದಲ್ಲೇ ಕಡಿಮೆ ಸಂಬಳ, ಜಾಸ್ತಿ ಕೆಲಸ!
ಕೋವಿಡ್​-19 ಸೋಂಕಿನಿಂದ ತೀವ್ರವಾಗಿ ಬಳಲಿ ಚೇತರಿಸಿಕೊಂಡವರು ಸ್ವಲ್ಪ ಸಮಯ ಅತಿಯಾಗಿ ಕೆಲಸ ಮಾಡಬಾರದು. ಇನ್ನೂ ಒಂದೆರಡು ವರ್ಷ ಅವರು ಅದನ್ನು ಪಾಲಿಸುವುದು ಒಳಿತು ಎಂಬುದು ಐಸಿಎಂಆರ್​ ನಡೆಸಿದ ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಅವರು ಸಚಿವರು ತಿಳಿಸಿದ್ದಾರೆ.
ಅದರಲ್ಲೂ ಗುಜರಾತ್​ನಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಅತಿಯಾಗಿದ್ದು, ಹಠಾತ್ ಕುಸಿದು ಬಿದ್ದು ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಗಾರ್ಭಾ ಸಮಾರಂಭವೊಂದರಲ್ಲಿ 24 ಗಂಟೆಗಳಲ್ಲಿ 10 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಮಾತ್ರವಲ್ಲ, ಯುವಕರು ಮಧ್ಯವಯಸ್ಕರು ಹೃದಯಾಘಾತಕ್ಕೆ ಒಳಗಾಗಿ ಸಾಯುತ್ತಿರುವ ಪ್ರಕರಣ ಹೆಚ್ಚಾಗಿದೆ.
#WATCH| Bhavnagar, Gujarat: On heart attack cases during the Garba festival, Union Health Minister Mansukh Mandaviya says, "ICMR has done a detailed study recently. The study says that those who have had severe covid and enough amount of time has not passed, should avoid…pic.twitter.com/qswGbAHevV
— ANI (@ANI)October 30, 2023

ಯುವಕರೇಕೆ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ ಎಂದು ಅಚ್ಚರಿಯೇ?: 70 ಗಂಟೆ ಕೆಲಸ.. ಮೂರ್ತಿ ವರ್ಸಸ್ ಮೂರ್ತಿ…

ಫ್ರೆಷರ್ಸ್​ಗೆ ಹೋಲಿಸಿದ್ರೆ ಇನ್​ಫೊಸಿಸ್ ಸಿಇಒ ಸಂಬಳ 2,200 ಪಟ್ಟು ಹೆಚ್ಚು!; ಅವರು ಎಷ್ಟು ಗಂಟೆ ಕೆಲಸ ಮಾಡ್ತಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + four =
Remember me
