ನವದೆಹಲಿ:ರಾಷ್ಟ್ರ ರಾಜಕಾರಣದಲ್ಲಿ ಭಾರೀ ಗದ್ದಲವನ್ನು ಉಂಟು ಮಾಡಿರುವ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ ಮಹತ್ವದ ದಾಖಲೆಗಳನ್ನು ಕಲೆಹಾಕಿ ವಿಚಾರಣೆ ನಡೆಸುತ್ತಿದೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಕರಣಕ್ಕೆ ಹೊಸ ಟ್ವಿಸ್ಟ್​ ನೀಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ (NCW) ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದನ್ನು ಬಹಿರಂಗಪಡಿಸಿದೆ.
NCW would like to state that 700 women have not given any complaints to NCW regarding Prajjawal Revanna case. Some media channels are falsely reporting this.
ಇದನ್ನೂ ಓದಿ:ರಣವೀರ್​​-ದೀಪಿಕಾ ವಿಚ್ಛೇದನ ಪಡೆಯುತ್ತಿರುವುದು ನಿಜಾನಾ; ಉಂಗುರ ತೋರಿಸಿ ನಟ ಕೊಟ್ಟ ಸ್ಪಷ್ಟನೆ ಹೀಗಿದೆ
ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ರೀತಿ ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ 700 ಮಹಿಳೆಯರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಯಾವುದೇ ದೂರು ನೀಡಿಲ್ಲ. ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ.
ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆಸ್‍ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್​​​ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + ten =
Remember me
