ಮುಂಬೈ:ಶಿಶುವಿಹಾರದ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಶಾಲಾ ಶೌಚಗೃಹದಲ್ಲಿ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಮುಂಬೈನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಗೆ ಕಾರಣವಾಯಿತು. ಥಾಣೆಯ ಬದ್ಲಾಪುರದಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲೇ ಈ ಕೃತ್ಯ ನಡೆದಿದ್ದು, ಸಾರ್ವಜನಿಕ ರಿಂದ ತೀವ್ರ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತವಾಯಿತು.
ಆರೋಪಿ ಅಕ್ಷಯ್ ಶಿಂಧೆ ಏಜೆನ್ಸಿಯೊಂದರ ಮೂಲಕ ಶಾಲೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ. ಆರಂಭದಲ್ಲಿ ಸಾಮಾನ್ಯ ದೂರು ದಾಖಲಿಸಲಾಗಿತ್ತು. ಆದರೆ ಬಳಿಕ ಪಾಲಕರ ಒತ್ತಾಯದ ಮೇರೆಗೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಅದಾಗ್ಯೂ ಎಫ್​ಐಆರ್ ದಾಖಲಿಸುವಲ್ಲಿ 12 ಗಂಟೆಗಳಿಗೂ ಅಧಿಕ ಕಾಲ ವಿಳಂಬವಾಗಿತ್ತು ಎಂದೂ ಆರೋಪಿಸಲಾಗಿದೆ.
ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ ಬದ್ಲಾಪುರ ನಗರದಲ್ಲಿ ಬಂದ್ ಪರಿಸ್ಥಿತಿ ಕಂಡುಬಂದಿದ್ದು, ಸಾರ್ವಜನಿಕರು ಸ್ಥಳೀಯ ರೈಲ್ವೆ ಹಳಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹೀಗಾಗಿ ಕೆಲಕಾಲ ರೈಲು ಪ್ರಯಾಣದಲ್ಲೂ ವ್ಯತ್ಯಯವಾಗಿತ್ತು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್​ಸಿಪಿಸಿಆರ್) ಈ ಪ್ರಕರಣದ ತನಿಖೆಗಾಗಿ ಬದ್ಲಾಪುರಕ್ಕೆ ತಂಡವೊಂದನ್ನು ಕಳಿಸಲಿರುವುದಾಗಿ ತಿಳಿಸಿದೆ.
ಲೋಪ ಒಪ್ಪಿಕೊಂಡ ಆಡಳಿತ ಮಂಡಳಿ:ಪ್ರಕರಣದ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಶಾಲಾ ಆಡಳಿತ ಮಂಡಳಿ, ಘಟನೆ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಲ್ಲದೆ, ವಿದ್ಯಾರ್ಥಿಗಳ ಹಿತರಕ್ಷಣೆ ಮಾಡುವಲ್ಲಿ ಗಂಭೀರ ಲೋಪವಾಗಿದೆ ಎಂದು ಹೇಳಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ, ಶಾಲಾ ಆವರಣದಲ್ಲಿ ಇನ್ನಷ್ಟು ಸಿಸಿಟಿವಿ ಕ್ಯಾಮರಾ ಅಳವಡಿಸುವ ಜತೆಗೆ ಮುಂದೆ ಈ ರೀತಿಯ ಘಟನೆ ಜರುಗದಂತೆ ಕ್ರಮಕೈಗೊಳ್ಳುತ್ತೇವೆ ಎಂದೂ ಭರವಸೆ ನೀಡಿದೆ.
ವಜಾ-ಅಮಾನತು:ಪಾಲಕರ ಒತ್ತಾಯಕ್ಕೆ ಮಣಿದ ಶಾಲಾ ಆಡಳಿತ ಮಂಡಳಿ ಪ್ರಾಂಶುಪಾಲರನ್ನು ಅಮಾನತು ಗೊಳಿಸಿದೆ. ತರಗತಿಯ ಉಸ್ತುವಾರಿ ಶಿಕ್ಷಕರು, ಮಕ್ಕಳನ್ನು ವಾಷ್​ರೂಮ್ೆ ಕರೆದೊಯ್ಯುವ ಜವಾಬ್ದಾರಿ ಹೊಂದಿದ್ದ ಇಬ್ಬರು ಸಹಾಯಕರನ್ನೂ ಕೆಲಸದಿಂದ ವಜಾ ಮಾಡಲಾಗಿದೆ. ಸ್ವಚ್ಛತಾ ಸಿಬ್ಬಂದಿಯನ್ನು ನೀಡಿದ್ದ ಏಜೆನ್ಸಿ ಜತೆಗಿನ ಒಪ್ಪಂದ ಮುರಿದುಕೊಂಡ ಶಾಲಾ ಆಡಳಿತ ಮಂಡಳಿ, ಆ ಗುತ್ತಿಗೆದಾರರನ್ನು ಕಪು್ಪಪಟ್ಟಿಗೆ ಸೇರಿಸಿದೆ. ಪ್ರಕರಣದ ಕುರಿತು ಕ್ರಮ ಜರುಗಿಸುವಲ್ಲಿ ಆರಂಭಿಕ ವಿಳಂಬ ಮಾಡಿದ ಬದ್ಲಾಪುರ್ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್, ಸಬ್ ಇನ್​ಸ್ಪೆಕ್ಟರ್ ಮತ್ತು ಹೆಡ್ ಕಾನ್​ಸ್ಟೆಬಲ್ ಅವರನ್ನು ಅಮಾನತುಗೊಳಿಸುವಂತೆ ಡಿಸಿಎಂ ದೇವೇಂದ್ರ ಫಡ್ನವಿಸ್ ಆದೇಶಿಸಿದ್ದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ. ಪ್ರಕರಣದ ಸಂಬಂಧ ತನಿಖೆ ನಡೆಸಲು ಐಪಿಎಸ್ ಆರತಿ ಸಿಂಗ್ ಅವರನ್ನು ನೇಮಿಸಲಾಗಿದೆ.
ತಪ್ಪಿತಸ್ಥರ ಬಗ್ಗೆ ಯಾವುದೇ ಮುಲಾಜಿಲ್ಲ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ.
| ಏಕನಾಥ್ ಶಿಂಧೆ ಸಿಎಂ
1992ರ ಅಜ್ಮೀರ್ ಸಾಮೂಹಿಕ ಅತ್ಯಾಚಾರ ಪ್ರಕರಣ: 6 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + 8 =
Remember me
