ಕೇರಳ:ಹೊಸ ವರ್ಷಾಚರಣೆಗೂ ಮುನ್ನ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸಿಡಿದೆದ್ದ ಕೇರಳದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (SFI) ಗವರ್ನರ್​ ಅವರ 30 ಅಡಿ ಎತ್ತರದ ಪ್ರತಿಕೃತಿಯನ್ನು ದಹಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದೆ.
ಇದನ್ನೂ ಓದಿ:ಖರ್ಗೆ ಆಸ್ತಿ V/S ಮೋದಿ; ಇಬ್ಬರ ಆಸ್ತಿ ಮೌಲ್ಯ ಎಷ್ಟು? ಯಾರ ವಿರುದ್ಧ ಹೆಚ್ಚು ಕ್ರಿಮಿನಲ್​ ಕೇಸ್​​,ಯಾರು ಅತೀ ಶ್ರೀಮಂತರು?!
ಇದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐನ ಸರಣಿ ಪ್ರತಿಭಟನೆಗಳ ನಡುವೆ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕಣ್ಣೂರು ಜಿಲ್ಲೆಯ ಪಯ್ಯಂಬಲಂ ಬೀಚ್‌ನಲ್ಲಿ ಜಮಾಯಿಸಿದ ಎಸ್‌ಎಫ್‌ಐ ಕಾರ್ಯಕರ್ತರು 30 ಅಡಿ ಎತ್ತರದ ರಾಜ್ಯಪಾಲರ ಪ್ರತಿಕೃತಿಯನ್ನು ಇಟ್ಟು, ಸುಟ್ಟುಹಾಕಿದ್ದಾರೆ.
ಎಸ್‌ಎಫ್‌ಐ ರಾಜ್ಯಾಧ್ಯಕ್ಷೆ ಅನುಶ್ರೀ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ರಾಜ್ಯಪಾಲರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಲಾಯಿತು. ಕಣ್ಣೂರಿನ ಪ್ರಮುಖ ಕೇಂದ್ರವಾದ ಪಯ್ಯಂಬಲಂ ಬೀಚ್ ಬಳಿ ಹೊಸ ವರ್ಷವನ್ನು ಆಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದ ಜನರಿಗೆ ಈ ಘಟನೆ ಅಚ್ಚರಿ ಮೂಡಿಸಿತು.
ಇದನ್ನೂ ಓದಿ:ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿದ ಪ್ರಕರಣ ಖಂಡಿಸಿ ಪ್ರತಿಭಟನೆ
ಗವರ್ನರ್ ಖಾನ್ ವಿರುದ್ಧ ಎಸ್‌ಎಫ್‌ಐ ಪ್ರತಿಭಟನೆ ನಡೆಸುತ್ತಿದ್ದು, ಸಂಘ ಪರಿವಾರದ ಸದಸ್ಯರನ್ನು ವಿಶ್ವವಿದ್ಯಾನಿಲಯ ಸೆನೆಟ್‌ಗೆ ನಾಮನಿರ್ದೇಶನ ಮಾಡುವ ಮೂಲಕ “ವಿಶ್ವವಿದ್ಯಾನಿಲಯಗಳನ್ನು ಕೇಸರಿಕರಣಗೊಳಿಸುತ್ತಿದೆ” ಎಂದು ಆರೋಪಿಸಿದೆ,(ಏಜೆನ್ಸೀಸ್).
BBKS10: ಸಿರಿ ಪ್ರಕಾರ ಸೀಸನ್​ 10ರ ವಿನ್ನರ್​ ಇವರೇ ನೋಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
