ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ಸುಪ್ರೀಂಕೋರ್ಟ್​ನ ಒಂಬತ್ತು ಸದಸ್ಯರ ಪೀಠವನ್ನು ಮಂಗಳವಾರ ರಚಿಸಲಾಗಿದೆ.
ಸಿಜೆಐ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಅಶೋಕ್ ಭೂಷಣ್, ಎಲ್. ನಾಗೇಶ್ವರ ರಾವ್, ಮೋಹನ್ ಎಂ. ಶಾಂತನಗೌಡರ್, ಎಸ್. ಅಬ್ದುಲ್ ನಜೀರ್, ಆರ್. ಸುಭಾಷ್ ರೆಡ್ಡಿ, ಬಿ. ಆರ್. ಗವಾಯ್ ಮತ್ತು ಸೂರ್ಯಕಾಂತ್ ಪೀಠದಲ್ಲಿರುವ ಸದಸ್ಯರು. ಹಿಂದೆ ತೀರ್ಪು ನೀಡಿದ್ದ ಪೀಠದಲ್ಲಿದ್ದ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್ ಮತ್ತು ಡಿ.ವೈ ಚಂದ್ರಚೂಡ್ ಹೊಸ ಪೀಠದಲ್ಲಿ ಇಲ್ಲ. ಮಹಿಳೆಯರ ಪ್ರವೇಶ ನಿಷೇಧವನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್ 2018ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸವೋನ್ನತ ನ್ಯಾಯಾಲಯದ ಒಂಬತ್ತು ಸದಸ್ಯರ ಪೀಠ ಮುಂದಿನ ಸೋಮವಾರ (ಜನವರಿ 13) ಆರಂಭಿಸಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twenty =
Remember me
