ಮಹಾರಾಷ್ಟ್ರ:ಲೋಕಸಭಾ ಚುನಾವಣೆ ಸಮೀಪದಲ್ಲಿರುವ ಹಿನ್ನೆಲೆ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಪ್ರಣಿತಿ ಶಿಂಧೆ ಪರ ಬಾಲಿವುಡ್​ನ ದಿಗ್ಗಜ ನಟ ಶಾರುಖ್ ಖಾನ್​ ಅವರಂತೆಯೇ ಹೋಲುವ ಮತ್ತೊಬ್ಬ ವ್ಯಕ್ತಿ ಪ್ರಚಾರಕ್ಕಿಳಿದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿದ ಬಿಜೆಪಿ ಇದೊಂದು ಸ್ಕ್ಯಾಮ್ ಬಿಟ್ಟರೆ ಬೇರೇನೂ ಅಲ್ಲ ಎಂದು ಆರೋಪಿಸಿದೆ.
ಇದನ್ನೂ ಓದಿ:ಚುನಾವಣೆ: ನಾಗಾಲ್ಯಾಂಡ್​ನ ಆರು ಜಿಲ್ಲೆಗಳಲ್ಲಿ 0% ಮತದಾನ, ಕಾರಣ ಹೀಗಿದೆ..!
ನಕಲಿ ಶಾರುಖ್ ಖಾನ್ ಅನ್ನು ಇಬ್ರಾಹಿಂ ಕದರಿ ಎಂದು ಹೇಳಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಫಿರ್ದೌಸ್ ಪಟೇಲ್ ಜತೆಗೆ ಸೋಲಾಪುರ ನಗರದಲ್ಲಿ ಭವ್ಯವಾದ ರೋಡ್‌ಶೋನಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಜನರ ಮತಗಳನ್ನು ತಮ್ಮತ್ತ ಸೆಳೆಯಲು ವಿಭಿನ್ನ ಪ್ರಯತ್ನಗಳತ್ತ ಕಾಂಗ್ರೆಸ್ ಮುಂದಾಗಿರುವುದು ವಿಡಿಯೋ ಮೂಲಕ ತಿಳಿದುಬಂದಿದೆ.
ನಗರದ ಪ್ರಮುಖ ಕ್ರಾಸ್‌ರೋಡ್‌ನಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ಮಹಾವಿಕಾಸ್ ಅಘಾಡಿ ಬ್ಯಾನರ್ ಅಡಿಯಲ್ಲಿ ಶಿಂಧೆ ಅವರ ಉಮೇದುವಾರಿಕೆಗೆ ಬೆಂಬಲ ಸೂಚಿಸುವ ಗುರಿಯನ್ನು ಹೊಂದಿತ್ತು ಎನ್ನಲಾಗಿದೆ. ಬಾಲಿವುಡ್ ತಾರೆ ಶಾರುಖ್ ಖಾನ್ ಅವರ ಹೋಲಿಕೆಗೆ ಹೆಸರುವಾಸಿಯಾದ ಇಬ್ರಾಹಿಂ ಕದರಿ ಈ ರ್ಯಾಲಿಯಲ್ಲಿ ಪಾಲ್ಗೊಂಡು, ಸೊಲ್ಲಾಪುರದ ಜನತೆಯ ಬಳಿ ಪ್ರಣಿತಿಗೆ ಮತ ನೀಡುವಂತೆ ಕೋರಿದ್ದಾರೆ. ಸದ್ಯ ಈ ವಿಡಿಯೋ ವಿರುದ್ಧ ಬಿಜೆಪಿ ಕೆಂಡಕಾರಿದೆ,(ಏಜೆನ್ಸೀಸ್).
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 5 =
Remember me
