ನವದೆಹಲಿ:ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೆಹಲಿ ಶಾಹೀನ್​ ಬಾಗ್​ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಖಂಡಿಸಲು ಹೋಗಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್​ ವಿವಾದ ಸೃಷ್ಟಿಸಿದ್ದಾರೆ.
ಟ್ವೀಟ್​ ಮಾಡಿರುವ ಅವರು, ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಶಾಹೀನ್​ ಬಾಗ್​ ಚಳವಳಿ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಇಲ್ಲಿ ಆತ್ಮಾಹುತಿ ಬಾಂಬರ್​ಗಳು ಹುಟ್ಟಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಶಾಹೀನ್​ಬಾಗ್​ ಸೂಸೈಡ್ ಬಾಂಬರ್​ಗಳ ತಳಿ ಸಂವರ್ಧನಾ ಕೇಂದ್ರವಾಗುತ್ತಿದೆ ಎಂದು ವಿವಾದ ಸೃಷ್ಟಿಸಿದ್ದಾರೆ.
ಕೇಂದ್ರ ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವರಾದ ಗಿರಿರಾಜ್​ ಸಿಂಗ್​ ಅವರು ಮೊದಲಿನಿಂದಲೂ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಕುಖ್ಯಾತರಾದವರು.
ಶಾಹೀನ್​ ಬಾಗ್ ಪ್ರತಿಭಟನೆಯನ್ನು ಈಗಾಗಲೇ ಹಲವು ಬಿಜೆಪಿ ನಾಯಕರು ವಿರೋಧಿಸಿದ್ದಾರೆ. ಈ ಪ್ರತಿಭಟನೆಗೆ ದೆಹಲಿಯ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಕೇಂದ್ರ ಸಚಿವ ಅಮಿತ್​ ಷಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇತರರು ಆರೋಪ ಮಾಡಿದ್ದಾರೆ.ಡಿ.18ರಿಂದಲೂ ಸುಮಾರು 100 ಜನ ದಕ್ಷಿಣ ದೆಹಲಿಯ ಶಾಹೀನ್ ಬಾಗ್​ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
