ಮುಂಬೈ:ಪ್ರಧಾನಿ ಮೋದಿ ಅವರು ಎಲ್ಲೆಲ್ಲಿ ರೋಡ್​ ಶೋ.. ರ್ಯಾಲಿ ನಡಸಿದ್ದಾರೋ ಅಲ್ಲೆಲ್ಲ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಆದ್ದರಿಂದ ಪ್ರಧಾನಿಯವರಿಗೆ ಧನ್ಯವಾದ ಹೇಳುವುದು ನನ್ನ ಕರ್ತವ್ಯ ಎಂದು ಎನ್‌ಸಿಪಿ (ಎಸ್‌ಸಿಪಿ) ನಾಯಕ ಶರದ್ ಪವಾರ್ ವ್ಯಂಗ್ಯವಾಡಿದ್ದಾರೆ.
ಇದನ್ನು ಓದಿ:ಮೋದಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಮಹಾವಿಕಾಸ್ ಅಘಾಡಿ (ಎಂವಿಎ) ಪರವಾಗಿ ರಾಜಕೀಯ ವಾತಾವರಣವನ್ನು ಕಲ್ಪಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾವು ಧನ್ಯವಾದ ಅರ್ಪಿಸುತ್ತೇನೆ ಎಂದು ಅವರು ಹೇಳಿದರು. ಮುಂಬರುವ ವಿಧಾನಸಭೆಯಲ್ಲಿ ಮೋದಿಯವರ ಸಭೆಗಳು ಹೆಚ್ಚೆಚ್ಚು ನಡೆಯಬೇಕು, ಆದ್ದರಿಂದ ನಾವು ಮೋದಿಯಿಂದಾಗಿ ಸ್ಪಷ್ಟ ಬಹುಮತದತ್ತ ಸಾಗುತ್ತಿದ್ದೇವೆ ಎಂದಿದ್ದಾರೆ.
ಲೋಕಸಭೆ ಚುನಾವಣೆ 2024ರಲ್ಲಿ ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ಮಹಾವಿಕಾಸ್ ಅಘಾಡಿ (ಎಂವಿಎ) ನಾಯಕರಾದ ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ಪೃಥ್ವಿರಾಜ್ ಚವಾಣ್ ಅವರು ದೇಶದ ಜನರಿಗೆ ಧನ್ಯವಾದಗಳನ್ನು ತಿಳಿದ್ದಾರೆ.
ಇದೇ ಸಮಯದಲ್ಲಿ ಶಿವಸೇನಾ ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ವಿರುದ್ಧ ಯಾರೂ ಹೋರಾಡಲು ಸಾಧ್ಯವಿಲ್ಲ, ಮಹಾರಾಷ್ಟ್ರದ ಜನರು ಬಿಜೆಪಿಗೆ ಸರಿ ಉತ್ತರು ಕೊಟ್ಟಿದ್ದಾರೆ. ಮಹಾರಾಷ್ಟ್ರದ ಜನತೆಗೆ ನಾವು ಆಭಾರಿಯಾಗಿದ್ದೇವೆ. ಈ ಹೋರಾಟ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು. ಇದೀಗ ಮೋದಿ ಸರ್ಕಾರ ಎನ್‌ಡಿಎ ಸರ್ಕಾರವಾಗಿ ಬದಲಾಗಿದೆ. ಈ ಸರ್ಕಾರ ಎಷ್ಟು ದಿನ ಕೆಲಸ ಮಾಡುತ್ತದೆ ಎಂಬುದು ಅನುಮಾನ. ನಾವು ಒಟ್ಟಾಗಿ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ ಎಂದಿದ್ದಾರೆ. (ಏಜೆನ್ಸೀಸ್​​)
ಮೋದಿ ಸರ್ಕಾರ ಪತನವಾಗಲಿದೆ ಎಂದಿದ್ದೇಕೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen + 7 =
Remember me
